ಕಲಬುರ್ಗಿ: ಗುಲ್ಬರ್ಗ ಲೋಕಸಭೆ ಪ.ಜಾ.ಒಬ್ಬ ಅಭ್ಯರ್ಥಿ ಮೇ 7ರಂದು ನಡೆಯಲಿರುವ ಕಲಬುರ್ಗಿ ಜಿಲ್ಲಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮೂರನೇ ದಿನವಾದ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಅಧಿಕಾರಿ ಬಿ.ಫೌಜಿಯಾ ತರನಮ್ ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿವರ ಇಂತಿದೆ. ಸ್ವತಂತ್ರ ಅಭ್ಯರ್ಥಿಯಾಗಿ ಶಶಿಧರ ಬಸವರಾಜ 1 ನಾಮಪತ್ರ ಸಲ್ಲಿಸಿದರು. ಏಪ್ರಿಲ್ 19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 22 ಕೊನೆಯ ದಿನವಾಗಿರುತ್ತದೆ. ಇದುವರೆಗೆ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.