Saturday, May 24, 2025
Google search engine

Homeರಾಜ್ಯರಾಜ್ಯದಲ್ಲಿ ೨೭ ಕಾಲರಾ ಪ್ರಕರಣ ಪತ್ತೆ

ರಾಜ್ಯದಲ್ಲಿ ೨೭ ಕಾಲರಾ ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಒಟ್ಟು ೨೭ ಕಾಲರಾ ಪ್ರಕರಣಗಳು ದೃಢಪಟ್ಟಿರುವುದಾಗಿ ಆರೋಗ್ಯ ಇಲಾಖೆ ಪ್ರಕಟಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ೧೩, ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ೧೦, ಮೈಸೂರಿನಲ್ಲಿ ಮೂರು ಹಾಗೂ ರಾಮನ ಗರದಲ್ಲಿ ಒಂದು ಪ್ರಕರಣ ವರದಿಯಾಗಿದೆ. ಏಪ್ರಿಲ್ ತಿಂಗಳಲ್ಲಿಯೇ ೨೧ ಪ್ರಕರಣಗಳು ಖಚಿತಪಟ್ಟಿವೆ. `ಕಲುಷಿತ ನೀರು ಸೇವನೆ ಹಾಗೂ ಬೀದಿ ಬದಿ ತೆರೆದಿಟ್ಟ ಆಹಾರ ಸೇವನೆಯಿಂದ ಕಾಲರಾ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಇದರಿಂದಾಗಿ ವ್ಯಕ್ತಿಯ ದೇಹದಲ್ಲಿ ವಾಂತಿ, ಭೇದಿ, ನಿರ್ಜಲೀಕರಣ, ಅತಿಸಾರ ಉಂಟಾಗಿ ವ್ಯಕ್ತಿಯು ನಿತ್ರಾಣಗೊಳ್ಳುತ್ತಾನೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯುವುದರಿಂದ ಸೋಂಕಿನಿಂದ ಚೇತರಿಸಿಕೊಳ್ಳಬಹುದು’ ಎಂದು ಇಲಾಖೆ ತಿಳಿಸಿದೆ.

RELATED ARTICLES
- Advertisment -
Google search engine

Most Popular