Thursday, May 22, 2025
Google search engine

Homeಅಪರಾಧಹುಬ್ಬಳ್ಳಿ ಕಾಲೇಜು ಕ್ಯಾಂಪಸ್‌ನಲ್ಲಿ: ವಿದ್ಯಾರ್ಥಿನಿಯ ಭೀಕರ ಕೊಲೆ

ಹುಬ್ಬಳ್ಳಿ ಕಾಲೇಜು ಕ್ಯಾಂಪಸ್‌ನಲ್ಲಿ: ವಿದ್ಯಾರ್ಥಿನಿಯ ಭೀಕರ ಕೊಲೆ

ಹುಬ್ಬಳ್ಳಿ: ನಗರದ ಪಾಲಿಕೆ ಸದಸ್ಯರೊಬ್ಬರ ಪುತ್ರಿಯನ್ನು ಯುವಕನೊಬ್ಬ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆಗೈದಿರುವ ಘಟನೆ ನಗರದ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ನಿನ್ನೆ ನಡೆದಿದೆ.

ನೇಹಾ ಹಿರೇಮಠ (೨೪) ಕೊಲೆಗೀಡಾದ ಯುವತಿ. ಮೃತ ನೇಹಾ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಮಗಳು. ನಗರದ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಇಂದು ಪರೀಕ್ಷೆ ಇತ್ತು. ಕಾಲೇಜಿಗೆ ತೆರಳಿದ್ದ ವೇಳೆ ಯುವಕ ಏಕಾಏಕಿ ದಾಳಿ ಮಾಡಿ ಕೊಲೆ ಮಾಡಿದ್ದಾನೆ.

ದಾಳಿಯಿಂದ ನೇಹಾ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಕೂಡಲೇ ಸ್ಥಳೀಯ ಸಹಪಾಠಿಗಳು ಹಾಗೂ ಕಾಲೇಜಿನ ಸಿಬ್ಬಂದಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೇ ನೇಹಾ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಆರೋಪಿ ಬಂಧನ ಪ್ರಕರಣ ಸಂಬಂಧ ಅದೇ ಕಾಲೇಜಿನ ವಿದ್ಯಾರ್ಥಿ ಆರೋಪಿ ಫಯಾಜ್ ಎಂಬಾತನನ್ನು ಹುಬ್ಬಳ್ಳಿಯ ವಿದ್ಯಾನಗರದ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಫಯಾಜ್ ಸವದತ್ತಿ ಮೂಲದವನೆಂದು ತಿಳಿದು ಬಂದಿದೆ.

RELATED ARTICLES
- Advertisment -
Google search engine

Most Popular