ಗಾಂಧೀನಗರ: ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಇಂದು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.
ಅಮಿತ್ ಶಾ ಅವರು ಗಾಂಧೀನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ತನ್ನ ಪಕ್ಷದ ಕಾರ್ಯದರ್ಶಿ ಸೋನಾಲ್ ಪಟೇಲ್ ಅವರನ್ನು ಗಾಂಧೀನಗರದಿಂದ ಕಣಕ್ಕಿಳಿಸಿದೆ. ಗುಜರಾತ್‌ನಲ್ಲಿ ಮೇ ೭ ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಜೂನ್ ೪ ರಂದು ಮತ ಎಣಿಕೆ ನಡೆಯಲಿದೆ.
೨೦೧೪ ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಧೀಮಂತ ಮತ್ತು ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಆರನೇ ಬಾರಿಗೆ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದರು.