ಬೆಂಗಳೂರು: ಲೋಕಸಭಾ ಚುನಾವಣೆ-2024 ಅಂಗವಾಗಿ ಮಾಧ್ಯಮಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಹಕರಿಗಾಗಿ ಮತದಾನದ ವಿಷಯದ ಬಗ್ಗೆ ರಾಜ್ಯ ಚುನಾವಣಾ ಆಯೋಗ ರಾಜ್ಯ ಮಟ್ಟದ ಛಾಯಾ ಚಿತ್ರಸ್ಪರ್ಧೆ ಯನ್ನು ಆಯೋಜಿಸಲಾಗಿದೆ.
ಕಳೆದ ಎರಡು ಸಾರ್ವತ್ರಿಕ ಚುನಾವಣೆಗಳ ಸಂದರ್ಭದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಛಾಯಾ ಚಿತ್ರ ಸ್ಪರ್ಧೆಯ ಮೂಲಕ ಚುನಾವಣಾ ಸಂಬಂಧಿತ ಅತ್ಯುತ್ತಮ ಹಾಗೂ ಸಂಗ್ರಹ ಯೋಗ್ಯ ಛಾಯಾಚಿತ್ರಗಳನ್ನು ಭಾರತ ಚುನಾವಣಾ ಆಯೋಗ ಪ್ರಶಂಸಿವುದರ ಜೊತೆಗೆ , ತನ್ನ ವರದಿ ಹಾಗೂ ಪುಸ್ತಕಗಳ ಮುಖಪುಟಗಳಲ್ಲಿ ಬಳಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆ ನಿಮಿತ್ತ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿ, ಅತ್ಯುತ್ತಮ ಛಾಯಾಚಿತ್ರ ತೆಗೆದ ಛಾಯಾಗ್ರಾಹಕರಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನವನ್ನು ನೀಡಲಾಗುತ್ತಿದೆ.
ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವ ಪತ್ರಿಕಾ ಛಾಯಾಗ್ರಾಹಕರು/ಹವ್ಯಾಸಿ ಛಾಯಾಗ್ರಹಕರು ತಾವು ತೆಗೆದ ಗರಿಷ್ಠ 5 ಅತ್ಯುತ್ತಮ ಛಾಯಾಚಿತ್ರಗಳನ್ನು ಸೂಕ್ತ ಶೀರ್ಷಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡಿರುವ ಅಕ್ರಿಡಿಟೇಷನ್ ಕಾರ್ಡ್ ಅಥವಾ ತಮ್ಮ ಮಾಧ್ಯಮ ಕಚೇರಿ ನೀಡಿರುವ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್, ಮನೆವಿಳಾಸ, ಮೊಬೈಲ್ ಸಂಖ್ಯೆ ಸೇರಿದಂತೆ ಮತ್ತಿತರ ವಿವರಗಳನ್ನು ಇ-ಮೇಲ್ ಐಡಿ : mediacellceokarnataka@gmail.com ಸಲ್ಲಿಸುವುದು. ಫೋಟೊಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 15-05-2024 ರಂದು ಬುಧವಾರ ಸಂಜೆ 5 ಗಂಟೆಯೊಳಗೆ ಇ-ಮೇಲ್ ಮೂಲಕ ಸಲ್ಲಿಸಲು ತಿಳಿಸಲಾಗಿದೆ.
ಬಹುಮಾನಗಳ ವಿವರ: ಮೊತ್ತ
1 ಪ್ರಥಮ ಬಹುಮಾನ 25,000/-
2 ದ್ವಿತೀಯ ಬಹುಮಾನ 15,000/-
3 ತೃತೀಯ ಬಹುಮಾನ 10,000/-
4 ಸಮಾಧಾನಕರ ಬಹುಮಾನ 6,000/-
5 ವಿಶೇಷ ಬಹುಮಾನ 5,000/-
ಒಟ್ಟು 61,000/-