Friday, May 23, 2025
Google search engine

Homeಅಪರಾಧಬೆಂಗಳೂರು: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಅಪ್ರಾಪ್ತ ಸೇರಿ ಮೂವರ ಬಂಧನ

ಬೆಂಗಳೂರು: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಅಪ್ರಾಪ್ತ ಸೇರಿ ಮೂವರ ಬಂಧನ

ಬೆಂಗಳೂರು: ವಿಳಾಸ ಕೇಳುವ ನೆಪದಲ್ಲಿ ಸಾರ್ವಜನಿ ಕರ ಮೊಬೈಲ್‌ ಕಸಿದು ಪರಾರಿಯಾಗುತ್ತಿದ್ದ ಅಪ್ರಾಪ್ತ ಸೇರಿ ಮೂವರು ಆರೋಪಿಗಳನ್ನು ಬಾಣಸ ವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸೈಯದ್‌ ಅಪ್ಸರ್‌ (23), ಸೈಯದ್‌ ಮೊಯಿನ್‌(22) ಹಾಗೂ ಒಬ್ಬ ಅಪ್ರಾಪ್ತನನ್ನು ಬಂಧಿಸಲಾಗಿದೆ. ಆರೋಪಿಗಳಿಂದ 10 ಸಾವಿರ ರೂ. ಮೌಲ್ಯದ ಮೊಬೈಲ್‌, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.

ಎಚ್‌ಆರ್‌ಬಿಆರ್‌ ಲೇಔಟ್‌ 2ನೇ ಬ್ಲಾಕ್‌ ನಿವಾಸಿ ಅಮರ್‌ ಬಹದ್ದೂರ್‌ ಸೌದ್‌ ವೃತ್ತಿಯಲ್ಲಿ ಸೆಕ್ಯೂರಿ ಗಾರ್ಡ್‌ ಆಗಿದ್ದಾರೆ.

ಏ.17ರಂದು ಕೆಲಸ ಮುಗಿಸಿಕೊಂಡು ಬಂದು ರಾತ್ರಿ 11 ಗಂಟೆಗೆ ತಮ್ಮ ಮನೆ ಬಳಿ ಕುಳಿತ್ತಿದ್ದಾಗ, ದ್ವಿಚಕ್ರ ವಾಹನದಲ್ಲಿ ಬಂದ ಮೂವರು ದುಷ್ಕರ್ಮಿಗಳು, ವಿಳಾಸ ಕೇಳುವ ನೆಪದಲ್ಲಿ ಅಮರ್‌ ಕೈಯಲ್ಲಿದ್ದ ಮೊಬೈಲ್‌ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular