Wednesday, May 21, 2025
Google search engine

Homeರಾಜ್ಯ2025ರ ವೇಳೆಗೆ ಬಿಜೆಪಿ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿ ರದ್ದುಪಡಿಸಲಿದೆ: ಮುಖ್ಯಮಂತ್ರಿ ರೇವಂತ್ ರೆಡ್ಡಿ ಆರೋಪ

2025ರ ವೇಳೆಗೆ ಬಿಜೆಪಿ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿ ರದ್ದುಪಡಿಸಲಿದೆ: ಮುಖ್ಯಮಂತ್ರಿ ರೇವಂತ್ ರೆಡ್ಡಿ ಆರೋಪ

ತೆಲಂಗಾಣ: ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ ನಡೆಯುತ್ತಿರುವ ನಡುವೆ, ಮುಂದಿನ ದಿನಗಳಲ್ಲಿ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿಯನ್ನು ಸಂಪೂರ್ಣವಾಗಿ ತೆಗೆದುಹಾಕಲು ಬಿಜೆಪಿ ಯೋಜಿಸುತ್ತಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆರೋಪಿಸಿದ್ದಾರೆ.

ಬಿಜೆಪಿ ತನ್ನ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ವರ್ಷವಾದ ೨೦೨೫ ರ ವೇಳೆಗೆ ಮೀಸಲಾತಿಯನ್ನು ರದ್ದುಗೊಳಿಸಲಿದೆ ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ. ೨೦೨೫ರ ವೇಳೆಗೆ ಆರ್‌ಎಸ್‌ಎಸ್ ೧೦೦ ವರ್ಷ ಪೂರೈಸಲಿದೆ. ೨೦೨೫ರ ವೇಳೆಗೆ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯನ್ನು ಕಿತ್ತು ಹಾಕಲು ಪ್ರಯತ್ನಿಸುತ್ತಿದ್ದಾರೆ. ಹಲವು ಬಾರಿ ಆರೆಸ್ಸೆಸ್ ಮತ್ತು ಬಿಜೆಪಿ ನಾಯಕರು ಮೀಸಲಾತಿ ಕುರಿತು ಪ್ರತಿಕ್ರಿಯಿಸಿದ್ದಾರೆ ಎಂದು ಗುರುವಾರ ಸಾರ್ವಜನಿಕ ಸಭೆಯಲ್ಲಿ ರೇವಂತ್ ರೆಡ್ಡಿ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳಿಗೆ (ಬಿಸಿ) ಮೀಸಲಾತಿಯನ್ನು ಪ್ರಸ್ತಾಪಿಸಿದ ಮಂಡಲ್ ಆಯೋಗದ ವರದಿಯ ಅನುಷ್ಠಾನವನ್ನು ಬಿಜೆಪಿ ಈ ಹಿಂದೆ ಸ್ಥಗಿತಗೊಳಿಸಿತ್ತು. ಈಗ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳಿಗೆ ಕೋಟಾಗಳನ್ನು ರದ್ದುಗೊಳಿಸಲು ಸಂಸತ್ತಿನಲ್ಲಿ ಅಧಿಕ ಸಂಖ್ಯೆಯಲ್ಲಿರುವುದು ಮುಖ್ಯ. ಅದಕ್ಕಾಗಿ ಲೋಕಸಭೆ ಚುನಾವಣೆಯಲ್ಲಿ ೪೦೦ ಸ್ಥಾನಗಳನ್ನು ಗೆಲ್ಲುವುದು ಬಿಜೆಪಿಯ ಗುರಿಯಾಗಿದೆ ಎಂದು ಈ ಸಂದರ್ಭದಲ್ಲೇ ರೇವಂತ್ ರೆಡ್ಡಿ ಆರೋಪಿಸಿದರು.

RELATED ARTICLES
- Advertisment -
Google search engine

Most Popular