Sunday, January 11, 2026
Google search engine

Homeರಾಜಕೀಯಸಿಎಂ ಸಿದ್ದರಾಮಯ್ಯ ಹತಾಶರಾಗಿ ಪ್ರಧಾನಿ ಮೋದಿ ವಿರುದ್ಧ ಟೀಕೆ: ಶೋಭಾ ಕರಂದ್ಲಾಜೆ

ಸಿಎಂ ಸಿದ್ದರಾಮಯ್ಯ ಹತಾಶರಾಗಿ ಪ್ರಧಾನಿ ಮೋದಿ ವಿರುದ್ಧ ಟೀಕೆ: ಶೋಭಾ ಕರಂದ್ಲಾಜೆ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹತಾಶರಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.

ಪಿಟಿಐ ಸುದ್ದಿಸಂಸ್ಥೆ ಜೊತೆಗೆ ಮಾತನಾಡಿದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ, ಇಡೀ ರಾಷ್ಟ್ರ ನರೇಂದ್ರ ಮೋದಿಯವರೊಂದಿಗೆ ನಿಂತಿದೆ. ಮೋದಿ ವಿರುದ್ಧ ಮಾತನಾಡುತ್ತಿರುವುದು ಸಿದ್ದರಾಮಯ್ಯ ಒಬ್ಬರೇ ಎಂದರು.

ಇಂದು ಪ್ರಜಾಪ್ರಭುತ್ವದ ಹಬ್ಬದ ದಿನವಾಗಿದ್ದು, ಜನರು ತಮ್ಮ ಹಕ್ಕನ್ನು ಚಲಾಯಿಸಬೇಕು. ನಮ್ಮ ಮುಂದಿನ ಪ್ರಧಾನಿ ಯಾರು ಎಂಬುದನ್ನು ಈ ಚುನಾವಣೆ ನಿರ್ಧರಿಸಲಿದ್ದು, ಮೋದಿ ಪ್ರಧಾನಿಯಾಗಬೇಕಾದರೆ ಪ್ರತಿಯೊಬ್ಬರು ಮತಗಟ್ಟೆಗೆ ಭೇಟಿ ನೀಡಬೇಕು ಎಂದು ಮನವಿ ಮಾಡಿದರು.

ಜನರು ದೇಶದ ಅಭಿವೃದ್ಧಿ ಮತ್ತು ಭದ್ರತೆಗಾಗಿ ಮೋದಿಯೊಂದಿಗೆ ನಿಂತಿದ್ದು, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಎನ್‌ ಡಿಎ 400 ಸ್ಥಾನಗಳನ್ನು ದಾಟುವ ಭರವಸೆ ಇದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವರು ಹೇಳಿದರು.

RELATED ARTICLES
- Advertisment -
Google search engine

Most Popular