ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾ ಅಭ್ಯರ್ಥಿ ಬಿ.ವಿಜಯಕುಮಾರ ಅವರಿಗೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಹೆಚ್‍ಡಿ ಪದವಿ ಘೋಷಿಸಿದೆ.
ನಗರದ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕ ಡಾ.ಹೊನ್ನೂರಾಲಿ.ಐ ಅವರ ಮಾರ್ಗದರ್ಶನದಲ್ಲಿ “ಪರಿಶಿಷ್ಟ ಪಂಗಡದ ಉಪ ಯೋಜನೆಯ ಅನುಷ್ಠಾನ-ಸಬಲೀಕರಣ ಮತ್ತು ಸವಾಲುಗಳು : ಪ್ರಾದೇಶಿಕ ಅಸಮತೋಲನ ನೆಲೆಗಟ್ಟನ್ನು ಅನುಲಕ್ಷಿಸಿ ಎಂಬ ವಿಷಯದ ಕುರಿತು ಮಂಡಿಸಿದ ಮಹಾ ಪ್ರಬಂಧಕ್ಕೆ ಪಿಹೆಚ್‍ಡಿ ಪದವಿ ನೀಡಲಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.