Tuesday, June 24, 2025
Google search engine

Homeರಾಜ್ಯಅಮೇಥಿಯಲ್ಲಿ ನಾಮಪತ್ರ ಸಲ್ಲಿಸಿದ ಸ್ಮೃತಿ ಇರಾನಿ

ಅಮೇಥಿಯಲ್ಲಿ ನಾಮಪತ್ರ ಸಲ್ಲಿಸಿದ ಸ್ಮೃತಿ ಇರಾನಿ

ಅಮೇಥಿ: ಲೋಕಸಭಾ ಚುನಾವಣೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಥಿಯಲ್ಲಿ ಬಿಜೆಪಿಯಿಂದ ನಾಮಪತ್ರ ಸಲ್ಲಿಕೆ. ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹಾಗೂ ಪತಿ ಜುಬಿನ್ ಇರಾನಿ ಅವರು ಹಾಜರಿದ್ದರು. ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್ ಶೋ ನಡೆಸಿದರು, ಅಮೇಥಿ ಕ್ಷೇತ್ರದಲ್ಲಿ ಐದನೇ ಹಂತದಲ್ಲಿ ಮೇ ೨೦ರಂದು ಚುನಾವಣೆ ನಡೆಯಲಿದೆ.

ಈ ಸ್ಥಾನಕ್ಕೆ ಇರಾನಿ ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿದ್ದಾರೆ. ೨೦೧೯ರ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಅವರನ್ನು ಸೋಲಿಸಿದ್ದರು. ಈ ಕ್ಷೇತ್ರಕ್ಕೆ ಕಾಂಗ್ರೆಸ್ ಇನ್ನೂ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. ಈ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಮೇ ೩ ಕೊನೆಯ ದಿನವಾಗಿದೆ ಇನ್ನು ನಾಲ್ಕು ದಿನಗಳು ಮಾತ್ರ ಬಾಕಿ ಉಳಿದಿವೆ. ೨೦೨೪ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಿಂದ ಬಿಜೆಪಿ ಮತ್ತೊಮ್ಮೆ ಇರಾನಿ ಅವರನ್ನು ಪಕ್ಷದ ಅಭ್ಯರ್ಥಿ ಎಂದು ಘೋಷಿಸಿದೆ. ೨೦೧೯ರಲ್ಲಿ ಇರಾನಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ೫೫,೦೦೦ ಮತಗಳ ಅಮತರದಿಂದ ಸೋಲಿಸಿದ್ದರು. ಅಮೇಥಿಯಿಂದ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಇನ್ನೂ ಘೋಷಿಸಿಲ್ಲ, ಅಮೇಥಿಯಲ್ಲಿ ಐದನೇ ಹಂತದ ಮತದಾನ ಮೇ೨೦ರಂದು ನಡೆಯಲಿದೆ.

RELATED ARTICLES
- Advertisment -
Google search engine

Most Popular