Sunday, June 8, 2025
Google search engine

HomeUncategorizedರಾಷ್ಟ್ರೀಯದೆಹಲಿ ಕಾಂಗ್ರೆಸ್‌ ನ ಇಬ್ಬರು ಮಾಜಿ ಶಾಸಕರ ರಾಜೀನಾಮೆ

ದೆಹಲಿ ಕಾಂಗ್ರೆಸ್‌ ನ ಇಬ್ಬರು ಮಾಜಿ ಶಾಸಕರ ರಾಜೀನಾಮೆ

ನವದೆಹಲಿ: ದೆಹಲಿ ಕಾಂಗ್ರೆಸ್‌ ನ ಮಾಜಿ ಶಾಸಕರಾದ ನೀರಜ್ ಬಸೋಯಾ ಮತ್ತು ನಸೀಬ್‌ ಸಿಂಗ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದು ರಾಜೀನಾಮೆ ಸಲ್ಲಿಸಿದ್ದಾರೆ.

ದೆಹಲಿಯಲ್ಲಿ ಎಎಪಿ ಕಳೆದ 7 ವರ್ಷಗಳಿಂದ ಅಧಿಕಾರದಲ್ಲಿದೆ. ಈ ಅವಧಿಯಲ್ಲಿ ಎಎಪಿ ಹಲವಾರು  ಹಗರಣಗಳಲ್ಲಿ ಭಾಗಿಯಾಗಿದ್ದು ನಾವು ಮತ್ತೆ ಅವರೊಂದಿಗೆ ಮೈತ್ರಿ ಮಾಡಿಕೊಳ್ಳುವುದು  ಅವಮಾನಕರಿಯಾಗಿದೆ.

ಈಗಾಗಲೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಎಎಪಿ ಹಿರಿಯ ನಾಯಕರಾದ  ಸತ್ಯೇಂದ್ರ ಜೈನ್ ಮತ್ತು ಮನೀಶ್ ಸಿಸೋಡಿಯಾ ಈಗಾಗಲೇ ಜೈಲಿನಲ್ಲಿದ್ದಾರೆ. ಅಲ್ಲದೇ ಪಕ್ಷದ ಇತರೆ ಮುಖಂಡರುಗಳ ವಿರುದ್ಧ  ಮದ್ಯ ಹಗರಣ, ಜಲ ಮಂಡಳಿ ಹಗರಣ ಸೇರಿದಂತೆ ವಿವಿಧ  ಗಂಭೀರ ಭ್ರಷ್ಟಾಚಾರದ ಆರೋಪಗಳಿವೆ. ಇಂತಹವರ ಜೊತೆ ನಮ್ಮ ಮೈತ್ರಿ ಸರಿಯಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಬೆಳವಣಿಗೆಗಳಿಂದ ಬೆಸತ್ತು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಅವರು ಪತ್ರದಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular