Friday, May 23, 2025
Google search engine

Homeಅಪರಾಧಮಂಡ್ಯದಲ್ಲಿ ಮತ್ತೆ ಭ್ರೂಣಲಿಂಗ ಪತ್ತೆ: ಮೂವರ ಬಂಧನ

ಮಂಡ್ಯದಲ್ಲಿ ಮತ್ತೆ ಭ್ರೂಣಲಿಂಗ ಪತ್ತೆ: ಮೂವರ ಬಂಧನ

ಮಂಡ್ಯ: ಕಳೆದ ವರ್ಷ ಇಡೀ ರಾಜ್ಯವನ್ನೇ ನಿಬ್ಬೆರಗಾಗಿಸಿದ್ದ ಭ್ರೂಣಲಿಂಗ ಪತ್ತೆ ದಂಧೆ ಇನ್ನೂ ಮುಂದುವರೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಆರೋಗ್ಯ ಇಲಾಖೆಯ ಕ್ವಾರ್ಟರ್ಸ್‌ನಲ್ಲಿಯೇ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ದಂಧೆ ನಡೆಯುತ್ತಿತ್ತು ಎಂಬ ಮತ್ತೊಂದು ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಆರೋಗ್ಯಾಧಿಕಾರಿಗಳು ದಾಳಿ ನಡೆಸಿದ್ದು, ಗರ್ಭಪಾತಕ್ಕೆ ಬಂದಿದ್ದ ಮಹಿಳೆಯನ್ನು ರಕ್ಷಿಸಿದ್ದಾರೆ.

ಕ್ವಾರ್ಟರ್ಸ್‌ನ ಮೇಲೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಮೋಹನ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಅರವಿಂದ್ ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿದ್ದಾರೆ. ಈ ವೇಳೆ, ಗರ್ಭಪಾತಕ್ಕೆ ಬಂದಿದ್ದ ಮೈಸೂರು ಮೂಲದ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೆ, ಕೃತ್ಯಕ್ಕೆ ಬಳಸುತ್ತಿದ್ದ ಯಂತ್ರೋಪಕರಣಗಳು ಜಪ್ತಿ ಮಾಡಲಾಗಿದ್ದು, ಮೂವರು ಅರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪಾಂಡವಪುರ ತಾಲೂಕು ಆಸ್ಪತ್ರೆ ಆಂಬುಲೆನ್ಸ್ ಚಾಲಕ ಆನಂದ್, ಅದೇ ಆಸ್ಪತ್ರೆಯ ಹೊರಗುತ್ತಿಗೆ ಡಿ ಗ್ರೂಪ್ ಸಿಬ್ಬಂದಿ ಅಶ್ವಿನಿ ಹಾಗೂ ಮತ್ತೊಬ್ಬ ಮಹಿಳೆಯನ್ನು ವಶಕ್ಕೆ ಪಡೆಯಲಾಘಿದೆ. ಚಾಲಕ ಆನಂದ್‌ಗೆ ನೀಡಲಾಗಿದ್ದ ಸರ್ಕಾರಿ ವಸತಿ ಗೃಹದಲ್ಲಿಯೇ ಈ ಕೃತ್ಯ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.

ಕಳೆದ ವರ್ಷ ಮಂಡ್ಯದಲ್ಲಿ ಆಲೆಮನೆಯಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ನಡೆಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದರು. ಹಲವರನ್ನು ಬಂಧಿಸಿದ್ದರು. ಮೈಸೂರಿನ ಕಾವೇರಿ ಹಾಗೂ ಲಕ್ಷ್ಮೀ ಡಯಾಗ್ನೋಸ್ಟಿಕ್ ಸೆಂಟರ್‌ಗಳಿಗೆ ಬೀಗ ಜಡಿಯಲಾಗಿತ್ತು.

RELATED ARTICLES
- Advertisment -
Google search engine

Most Popular