Saturday, May 24, 2025
Google search engine

Homeಅಪರಾಧಶಿವಕಾಶಿಯಲ್ಲಿ ಪಟಾಕಿ ಫ್ಯಾಕ್ಟರಿ ಸ್ಫೋಟ: ೮ ಕಾರ್ಮಿಕರು ಸಾವು

ಶಿವಕಾಶಿಯಲ್ಲಿ ಪಟಾಕಿ ಫ್ಯಾಕ್ಟರಿ ಸ್ಫೋಟ: ೮ ಕಾರ್ಮಿಕರು ಸಾವು

ಶಿವಕಾಶಿ: ಸರ್ಕಾರ ಹಾಗೂ ಪೊಲೀಸರ ಖಡಕ್ ಸೂಚನೆ, ಕಟ್ಟು ನಿಟ್ಟಿನ ನಿಯಮ ಜಾರಿಗೊಳಿಸಿದರೂ ಇದೀಗ ಮತ್ತೊಂದು ಪಟಾಕಿ ಫ್ಯಾಕ್ಟರಿ ಸ್ಫೋಟ ಘಟನೆ ನಡೆದಿದೆ. ತಮಿಳುನಾಡಿನ ಶಿವಕಾಶಿ ಬಳಿಯಲ್ಲಿರುವ ಚೆನ್ನಗಲಂಪಟ್ಟಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದೆ. ಕೆಲಸದ ಸಮಯದಲ್ಲೇ ಈ ಸ್ಪೋಟ ಸಂಭವಿಸಿದೆ. ಇದರ ಪರಿಣಾಮ ಕೆಲಸ ಮಾಡುತ್ತಿದ್ದ ೮ ಮಂದಿ ಕಾರ್ಮಿಕರು ಈ ಸ್ಪೋಟಕ್ಕೆ ಬಲಿಯಾಗಿದ್ದಾರೆ. ಇನ್ನು ೮ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ಪರಿಣಾಮ ಇಡೀ ಫ್ಯಾಕ್ಟರಿ ಹೊತ್ತಿ ಉರಿದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ.

ಯಾವ ಕಾರಣಕ್ಕೆ ಬೆಂಕಿ ಹೊತ್ತಿಕೊಂಡಿದೆ ಅನ್ನೋ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದು, ಬೆಂಕಿಯ ಕೆನ್ನಾಲಗೆ ಪಕ್ಕದ ಫ್ಯಾಕ್ಟರಿಗೆ ತಗಲುವ ಅಪಾಯವನ್ನು ನಿಯಂತ್ರಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಫ್ಯಾಕ್ಟರಿಯಲ್ಲಿ ಸಂಪೂರ್ಣ ಹೊಗೆ ತುಂಬಿಕೊಂಡಿರುವ ಕಾರಣ ಕಾರ್ಯಾಚರಣೆ ಕಷ್ಟವಾಗಿದೆ.

RELATED ARTICLES
- Advertisment -
Google search engine

Most Popular