Sunday, May 25, 2025
Google search engine

Homeರಾಜ್ಯಎಸ್‌ ಎಸ್‌ ಎಲ್‌ ಸಿ ಪರೀಕ್ಷೆ- 2ರ ವೇಳಾಪಟ್ಟಿ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ- 2ರ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಇಂದು(ಮೇ 09) ಪ್ರಕಟವಾಗಿದೆ.

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ-2ರ ದಿನಾಂಕ ನಿಗದಿಯಾಗಿದ್ದು, ವೇಳಾಪಟ್ಟಿ ಪ್ರಕಟಿಸಿದ್ದು, ಜೂನ್‌ 7ರಿಂದ 14ರವರೆಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30ರವರೆಗೆ ಪರೀಕ್ಷೆಗಳು ನಡೆಯಲಿವೆ. ಇನ್ನೂ ಪ್ರತಿ ವಿಷಯಕ್ಕೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವೇಳಾಪಟ್ಟಿ

7-6-2024- ಪ್ರಥಮ ಭಾಷೆ

8-6-2024- ತೃತೀಯ ಭಾಷೆ

10-6-2024- ಗಣಿತ, ಸಮಾಜ ಶಾಸ್ತ್ರ

11-6-2024- ಅರ್ಥ ಶಾಸ್ತ್ರ, ಎಲಿಮೆಂಟ್ಸ್‌ ಆಫ್‌ ಎಲೆಕ್ಟ್ರಿಕಲ್‌ ಇಂಜಿನಿಯರಿಂಗ್‌

12-6-2024- ವಿಜ್ಞಾನ ಹಾಗೂ ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ

13-6-2024- ದ್ವಿತೀಯ ಭಾಷೆ (ಇಂಗ್ಲೀಷ್‌ ಹಾಗೂ ಕನ್ನಡ)

14-6-2024 – ಸಮಾಜ ವಿಜ್ಞಾನ

ಪರೀಕ್ಷೆ ಸೂಚನೆಗಳು

ಜೂನ್‌ 15ರಂದು ಜೆಟಿಎಸ್‌ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಹಾಗೂ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಡೆಸಲಾಗುವುದು. ಸಬ್ಜೆಕ್ಟ್‌ ಕೋಡ್‌ 15 ಮತ್ತು 60ರ ವಿಷಯಗಳು ಆದರ್ಶ ವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತವೆ. ಹಿಂದೂಸ್ತಾನಿ ಸಂಗೀತ ಮತ್ತು ಕರ್ನಾಟಕ ಸಂಗೀತ ವಿಷಯದ ಪರೀಕ್ಷೆಯನ್ನು ಮಧ್ಯಾಹ್ನ 2 ಗಂಟೆಯಿಂದ ಸಾಯಂಕಾಲ 5.15 ರವರೆಗೆ ನಿಗದಿಪಡಿಸಿದೆ. ಸದರಿ ವಿಷಯಗಳ ತಾತ್ವಿಕ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಮಧ್ಯಾಹ್ನ 3.45 ಗಂಟೆಯವರೆಗೆ ಮತ್ತು ಪ್ರಾಯೋಗಿಕ ಪರೀಕ್ಷೆಯನ್ನು ಮಧ್ಯಾಹ್ನ 3.45 ರಿಂದ ಸಾಯಂಕಾಲ 5.15 ಗಂಟೆಯವರೆಗೆ ನಡೆಸಲಾಗುವುದು.

ವಿವಿಧ ಪ್ರಕಾರದ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ಬರಹಗಾರರ ಸೌಲಭ್ಯ ಅಥವಾ ಹೆಚ್ಚುವರಿ ಸಮುಯದ ಅಥವಾ ಎರಡನ್ನೂ ಪಡೆಯುವ ಅವಕಾಶವಿದೆ. ಈ ವಿದ್ಯಾರ್ಥಿಗಳು ಮೂರು ಗಂಟೆಯ ಪ್ರಶ್ನೆಪತ್ರಿಕೆಗೆ ಉತ್ತರಿಸಲು ಹೆಚ್ಚುವರಿಯಾಗಿ 60 ನಿಮಿಷಗಳು, ಎರಡೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ 50 ನಿಮಿಷಗಳು, ಎರಡು ಗಂಟೆಯ ಪ್ರಶ್ನೆಪತ್ರಿಕೆಗೆ 40 ನಿಮಿಷಗಳು, ಒಂದೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ ಹೆಚ್ಚುವರಿಯಾಗಿ 30 ನಿಮಿಷಗಳನ್ನು ನೀಡಲಾಗುವುದು.

ಪ್ರಥಮ ಭಾಷಾ ವಿಷಯಗಳು ಮತ್ತು ಐಚ್ಛಿಕ ವಿಷಯಗಳಿಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು ದ್ವಿತೀಯ ಭಾಷಾ ವಿಷಯಗಳು ಹಾಗೂ ತೃತೀಯ ಭಾಷಾ ವಿಷಯಗಳಿಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1:15ರವರೆಗೆ ಅವಧಿ ನಿಗದಿಪಡಿಸಿದೆ. ಪ್ರಥಮ ಭಾಷಾ ವಿಷಯಗಳು ಮತ್ತು ಐಚ್ಛಿಕ ವಿಷಯಗಳ ಪರೀಕ್ಷೆ ಬರೆಯಲು 3 ಗಂಟೆ ಮತ್ತು ಪ್ರಶ್ನೆಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಿಗೆ ಪರೀಕ್ಷೆ ಬರೆಯಲು 2 ಗಂಟೆ 45 ನಿಮಿಷ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ. ಎನ್.ಎಸ್.ಕ್ಯೂ.ಎಫ್ ವಿಷಯಗಳ ಪರೀಕ್ಷೆ ಬೆಳಗ್ಗೆ 10.15 ರಿಂದ 12.30ರವರೆಗೆ ನಡೆಯಲಿದೆ. ಎನ್.ಎಸ್.ಕ್ಯೂ.ಎಫ್. ಪರೀಕ್ಷಾ ವಿಷಯಗಳ ಪರೀಕ್ಷೆ ಬರೆಯಲು 2 ಗಂಟೆ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.

RELATED ARTICLES
- Advertisment -
Google search engine

Most Popular