Thursday, May 22, 2025
Google search engine

HomeUncategorizedರಾಷ್ಟ್ರೀಯಬಿಜೆಡಿ- ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ: ಓರ್ವ ಸಾವು, 7 ಮಂದಿಗೆ ಗಾಯ

ಬಿಜೆಡಿ- ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ: ಓರ್ವ ಸಾವು, 7 ಮಂದಿಗೆ ಗಾಯ

ಬೆರ್ಹಾಂಪುರ (ಒಡಿಶಾ):  ಆಡಳಿತರೂಢ ಬಿಜೆಡಿ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಸಂಘರ್ಷದಲ್ಲಿ ಓರ್ವ ಮೃತಪಟ್ಟು 7 ಮಂದಿ ಗಾಯಗೊಂಡಿರುವ ಘಟನೆ ಒಡಿಶಾದ ಗಂಜಾಮ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಖಾಲ್ಲಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀಕೃಷ್ಣ ಸರಾನ್‌ಪುರ ಗ್ರಾಮದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ಪೋಸ್ಟರ್ ಅಂಟಿಸುವ ಸಂಬಂಧ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಜಗಳ ನಡೆದಿದೆ.

ಬಿಜೆಪಿ ಕಾರ್ಯಕರ್ತ ದಿಲೀಪ್ ಕುಮಾರ್ ಪಹಾನ (26) ಮೃತಪಟ್ಟವರು.  ಘಟನೆಯಲ್ಲಿ ಗಾಯಗೊಂಡಿದ್ದ ದಿಲೀಪ್ ಕುಮಾರ್ ಅವರನ್ನು ಇಲ್ಲಿನ ಎಂಕೆಇಸಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಜಗಳದ ವೇಳೆ ಇತ್ತಂಡಗಳೂ ಚೂಪಾದ ಶಸ್ತ್ರಾಸ್ತ್ರಗಳನ್ನು ಬಳಸಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಿಂದ ಗೊತ್ತಾಗಿದೆ. ಗಾಯಾಳುಗಳು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಖಾಲ್ಲಿಕೋಟೆ ವಿಧಾನಸಭೆ ಕ್ಷೇತ್ರದ ಬಿಜೆಡಿ ಅಭ್ಯರ್ಥಿ ಹಾಗೂ ಶಾಸಕಿ ಸೂರ್ಯಮಣಿ ವೈದ್ಯ ಅವರ ಮನೆಯ ಸಮೀಪ ಇದ್ದ ಹಲವು ಕಾರುಗಳನ್ನು ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

RELATED ARTICLES
- Advertisment -
Google search engine

Most Popular