Friday, May 23, 2025
Google search engine

Homeರಾಜ್ಯಸುದ್ದಿಜಾಲ30 ವರ್ಷಗಳ ಹಿಂದೆ ತೀರಿಹೋದ ಮಗಳಿಗೆ ವರ ಬೇಕಾಗಿದೆ: ಹೀಗೊಂದು ವಿಚಿತ್ರ ಜಾಹೀರಾತು

30 ವರ್ಷಗಳ ಹಿಂದೆ ತೀರಿಹೋದ ಮಗಳಿಗೆ ವರ ಬೇಕಾಗಿದೆ: ಹೀಗೊಂದು ವಿಚಿತ್ರ ಜಾಹೀರಾತು

ಮಂಗಳೂರು(ದಕ್ಷಿಣ ಕನ್ನಡ): ವರ ಬೇಕು, ವಧು ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ ನೋಡಿರಬಹುದು. ಆದರೆ ಇತ್ತೀಚಿಗೆ ಪತ್ರಿಕೆಯಲ್ಲಿ ನೀಡಲಾದ ಮದುವೆಯ ಜಾಹೀರಾತು ಬಾರಿ ವೈರಲ್ ಆಗಿದೆ. ಅದರಲ್ಲಿ ಕುಟುಂಬವೊಂದು 30 ವರ್ಷಗಳ ಹಿಂದೆ ತೀರಿಹೋಗಿರುವ ಮಗಳಿಗೆ ಜೋಡಿಯನ್ನು ಹುಡುಕುತ್ತಿದೆ.

ಹೌದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿರುವ ಕುಟುಂಬವೊಂದು “ತಮ್ಮ ಮಗಳು 30 ವರ್ಷಗಳ ಹಿಂದೆ ನಿಧನಗೊಂಡಿದ್ದು, ನಮಗೆ 30 ವರ್ಷಗಳ ಹಿಂದೆ ನಿಧನರಾದ ವರನ ಅಗತ್ಯವಿದೆ. ಅಂತಹ ಯಾವುದೇ ವರನಿದ್ದರೆ ದಯವಿಟ್ಟು ನಮ್ಮನ್ನು ಸಂಪರ್ಕಿಸಿ” ಎಂದು ಪತ್ರಿಕೆಯೊಂದಕ್ಕೆ ಜಾಹೀರಾತನ್ನು ನೀಡಿದ್ದಾರೆ. ಈ ಜಾಹೀರಾತಿನ ಜೊತೆಗೆ, ಮೃತ ಹುಡುಗಿಯ ವಿವರಗಳನ್ನು ಸಹ ಸೇರಿಸಲಾಗಿದೆ. ಈ ಸುದ್ದಿ ನಮಗೆ ಆಶ್ಚರ್ಯವನ್ನುಂಟು ಮಾಡಬಹುದು. ಏಕೆಂದರೆ ಸತ್ತವರ ಮದುವೆಯನ್ನು ಮಾಡುವ ಸಂಪ್ರದಾಯ ರೂಢಿಯಲ್ಲಿದೆ.

ಕುಲೆ (ಪ್ರೇತ) ಮದುವೆ:

ವಯಸ್ಸಿಗೆ ಬಂದಂತಹ ಹುಡುಗ- ಹುಡುಗಿಯರು ಮದುವೆ ಆಗದೆಯೇ ನಿಧನ ಹೊಂದಿದರೆ ಅವರಿಗೆ ಮೋಕ್ಷ ಪ್ರಾಪ್ತಿಯಾಗುವುದಿಲ್ಲ ಎಂಬುದು ತುಳುನಾಡಿನ ಜನರ ನಂಬಿಕೆಯಾಗಿದೆ. ಹಾಗಾಗಿ ಅವರಿಗೆ ಮೋಕ್ಷ ನೀಡಲು ಈ ಆಚರಣೆಯನ್ನು ಮಾಡಲಾಗುತ್ತದೆ. ಇದು ಎಲ್ಲಾ ಕುಟುಂಬಗಳಲ್ಲಿಯೂ ಇಲ್ಲ. ಆದರೆ ಕೆಲವರು ಇದನ್ನು ಕಟ್ಟುನಿಟ್ಟಾಗಿ ಆಚರಣೆ ಮಾಡಿಕೊಂಡು ಬರುತ್ತಿದ್ದಾರೆ. ಇದರಲ್ಲಿ ಹುಡುಗಿ ನೋಡುವ ಶಾಸ್ತ್ರ, ನಿಶ್ಚಿತಾರ್ಥ, ಜವಳಿ ಇನ್ನಿತರ ಎಲ್ಲಾ ಮದುವೆಯ ವಿಧಿ ವಿಧಾನಗಳನ್ನು ನಡೆಸಲಾಗುತ್ತದೆ. ಆದರೆ ಇವೆಲ್ಲಾ ಹಿಂದೆ ಕುಟುಂಬಕ್ಕೆ ಸೀಮಿತವಾಗಿ ಗೌಪ್ಯವಾಗಿ ನಡೆಯುತ್ತಿತ್ತು, ಆದರೆ ಕಳೆದ ಕೆಲವು ವರ್ಷಗಳಿಂದ ಇದು ಮುಕ್ತವಾಗಿ ನಡೆಯುತ್ತಿದೆ. ಹಾಗಾಗಿ ಈ ಆಚರಣೆ ಬೆಳಕಿಗೆ ಬಂದಿದೆ.

RELATED ARTICLES
- Advertisment -
Google search engine

Most Popular