ಪಿರಿಯಾಪಟ್ಟಣ: ಸ್ವಚ್ಛತೆಗೆ ಹೆಚ್ಚು ಒತ್ತು ನೀಡುವ ಮೂಲಕ ಖಾಯಿಲೆಗಳು ಹರಡದಂತೆ ನಿಗಾ ವಹಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ಕೆ ಶ್ರೀನಿವಾಸ್ ತಿಳಿಸಿದರು.
ಪಟ್ಟಣದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ನಡೆದ ರಾಷ್ಟ್ರೀಯ ಡೆಂಗ್ಯು ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು, ನಗರ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಆರೋಗ್ಯ ಇಲಾಖೆ ವತಿಯಿಂದ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಸಮುದಾಯದ ಸಹಕಾರ ಅತ್ಯಗತ್ಯವಿದೆ ಎಂದರು.
ತಾಲ್ಲೂಕು ಪಂಚಾಯಿತಿ ಇಓ ಡಿ.ಬಿ ಸುನಿಲ್ ಕುಮಾರ್ ಅವರು ಮಾತನಾಡಿ ಗ್ರಾಮ ಪಂಚಾಯಿತಿ ಟಾಸ್ಕ್ ಫೋರ್ಸ್ ಗಳ ಮುಖಾಂತರ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸೂಚಿಸಲಾಗಿದೆ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು ಎಂದರು.
ಶಾನುಭೋಗನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಸುನಿಲ್ ಕುಮಾರ್ ಅವರು ಮಾತನಾಡಿ ನಮ್ಮ ಸುತ್ತ ಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಂಡರೆ ಕಾಯಿಲೆಗಳಿಂದ ದೂರವಿದ್ದು ಆರೋಗ್ಯಕರ ಜೀವನ ನಡೆಸಬಹುದು ಎಂದು ತಿಳಿಸಿ ಡೆಂಗ್ಯೂ ಕಾಯಿಲೆ ಹರಡುವ ವಿಧಾನ ಮತ್ತು ಅದನ್ನು ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು.
ಆರೋಗ್ಯ ನಿರೀಕ್ಷಣಾಧಿಕಾರಿ ರವಿ ಅವರು ಓವರ್ ಹೆಡ್ ಟ್ಯಾಂಕ್ ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿದರು, ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಜಿ.ಸಿ ಮಹದೇವ್, ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ ಲತಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ
ಕೆ.ಆರ್ ಪ್ರಕಾಶ್, ಜಿಲ್ಲಾ ಮೇಲ್ವಿಚಾರಕ ಸಿದ್ದೇಗೌಡ, ಲಲಿತಾ, ಅನಿಲ್, ಉಷಾ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು