Wednesday, May 21, 2025
Google search engine

Homeರಾಜ್ಯಇಂಡಿಯಾ ಬಣ ಗೆದ್ದರೆ ಪ್ರಧಾನಿ ಹೆಸರನ್ನು ನಿರ್ಧರಿಸುತ್ತೇವೆ: ಮಲ್ಲಿಕಾರ್ಜುನ ಖರ್ಗೆ

ಇಂಡಿಯಾ ಬಣ ಗೆದ್ದರೆ ಪ್ರಧಾನಿ ಹೆಸರನ್ನು ನಿರ್ಧರಿಸುತ್ತೇವೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಒಂದು ವೇಳೆ ಇಂಡಿಯಾ ಬಣವು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಹುಮತ ಪಡೆಯುವಲ್ಲಿ ಯಶಸ್ವಿಯಾದರೆ, ನಾವೆಲ್ಲರೂ ಕುಳಿತು, ಚರ್ಚೆ ಮಾಡಿ ಪ್ರಧಾನಿ ಹೆಸರನ್ನು ಅಂತಿಮಗೊಳಿಸುತ್ತೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.

ಚಂಡೀಗಢದಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಮಲ್ಲಿಕಾರ್ಜುನ ಖರ್ಗೆ, ಚುನಾವಣೆಯಲ್ಲಿ I.N.D.I.A ಬ್ಲಾಕ್ ಗೆದ್ದರೆ ನಮ್ಮ ಒಕ್ಕೂಟದ ಪಾಲುದಾರರು ಕುಳಿತು ಪ್ರಧಾನಿ ಹೆಸರನ್ನು ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಜಾತಿ ಗಣತಿ ನಡೆಸಿ ಜನರ ಒಡವೆ, ಜಮೀನು, ಎಮ್ಮೆಗಳನ್ನು ಕಸಿದುಕೊಳ್ಳುತ್ತದೆ ಎಂದು ಪ್ರಧಾನಿ ಮೋದಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ನಾವು ಇಷ್ಟು ವರ್ಷ ಆಡಳಿತ ನಡೆಸಿದ್ದೇವೆ, ಯಾರೊಬ್ಬರ ಮಂಗಳಸೂತ್ರವನ್ನಾದರೂ ಕಸಿದುಕೊಂಡಿದ್ದೇವೆಯೇ ಎಂದು ಕಾಂಗ್ರೆಸ್ ಮುಖ್ಯಸ್ಥ ಖರ್ಗೆ ಪ್ರಶ್ನಿಸಿದ್ದಾರೆ.

RELATED ARTICLES
- Advertisment -
Google search engine

Most Popular