ಮೈಸೂರು: ಯತೀಂದ್ರ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್‌ನವರು ಎಂಎಲ್‌ಸಿ ಮಾಡುವುದಾಗಿ ಹೇಳಿದ್ದರು. ಕಾದು ನೋಡಬೇಕು. ನಿಮ್ಮನ್ನು ಎಮ್‌ಎಲ್‌ಸಿ ಮಾಡುತ್ತೇವೆ, ನಿಮ್ಮ ತಂದೆಯವರಿಗೆ ಕ್ಷೇತ್ರ ಬಿಟ್ಟು ಕೊಡಿ ಅಂತ ಯತೀಂದ್ರ ಅವರಿಗೆ ಹೈಕಮಾಂಡ್ ಹೇಳಿತ್ತು. ವರಿಷ್ಠರ ಮಾತಿಗೆ ತಲೆ ಬಾಗಿ ಕ್ಷೇತ್ರ ಬಿಟ್ಟುಕೊಟ್ಟಿದ್ದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಇಂದು ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಕೋಲಾರದಿಂದ ಸ್ಪರ್ಧಿಸಬೇಕು ಅಂದುಕೊಂಡಿದ್ದೆ. ಇಲ್ಲ ನೀವು ವರುಣಾದಿಂದ ಸ್ಪರ್ಧೆ ಮಾಡಿ ಅಂತ ಹೈಕಮಾಂಡ್ ಹೇಳಿದರು. ಯತೀಂದ್ರ ಅವರನ್ನು ಎಮ್‌ಎಲ್‌ಸಿ ಮಾಡುತ್ತಾರಾ ಕಾದು ನೋಡಬೇಕು ಎಂದರು.
ನಮ್ಮ ಸುತ್ತಮುತ್ತಲಿನ ೪೦ ಪೋನ್‌ಗಳನ್ನು ಸರ್ಕಾರ ಟ್ಯಾಪ್ ಮಾಡಿದೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು. ಪ್ರಜ್ವಲ್ ರೇವಣ್ಣ ಅವರ ಪ್ರಕರಣವನ್ನು ಡೈವರ್ಟ್ ಮಾಡಲು ಕುಮಾರಸ್ವಾಮಿ ಅವರು ಏನೇನೋ ಹೇಳುತ್ತಿದ್ದಾರೆ. ಕುಮಾರಸ್ವಾಮಿ ಈ ನೆಲದ ಕಾನೂನಿಗೆ ಗೌರವ ಕೊಡಬೇಕು ಎಂದರು.
ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡುವಂತೆ ನಾನು ಪ್ರಧಾನಿ ಮೋದಿಯವರಿಗೆ ಎರಡು ಬಾರಿ ಪತ್ರ ಬರೆದಿದ್ದೇನೆ. ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನನ್ನ ಪತ್ರಕ್ಕಂತೂ ಈವರೆಗೂ ಪ್ರಧಾನಿ ಉತ್ತರವನ್ನ ಕೊಟ್ಟಿಲ್ಲ. ಒಬ್ಬ ಸಿಎಂ ಪತ್ರ ಬರೆದಾಗ ಉತ್ತರ ಕೊಡುತ್ತಾರೆಂದು ವಿಶ್ವಾಸವಿದೆ. ನೋಡೋಣ ಎರಡನೇ ಪತ್ರಕ್ಕಾದರೂ ಉತ್ತರ ಕೊಡುತ್ತಾರಾ ಅಂತ ಎಂದು ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ ಮೇಲೆ ಅತ್ಯಾಚಾರ, ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳಿವೆ. ಈ ವಿಚಾರವನ್ನು ಡೈವರ್ಟ್ ಮಾಡಲು ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಹೇಳುತ್ತಿದ್ದಾರೆ. ಪ್ರಜ್ವಲ್ ರೇವಣ್ಣರನ್ನು ನಾನು ಅಪರಾಧಿ ಅಂತ ಎಲ್ಲೂ ಹೇಳಿಲ್ಲ. ನಾನು ಸಹ ಆರೋಪಿ ಅಂತಲೇ ಹೇಳುತ್ತಿರುವುದು ಎಂದು ತಿರುಗೇಟು ನೀಡಿದರು.
ಹೆಚ್‌ಡಿ ದೇವೇಗೌಡರ ಕುಟುಂಬದಿಂದ ಪ್ರಜ್ವಲ್ ಹೊರಹಾಕುವ ವಿಚಾರವಾಗಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ದೇವೇಗೌಡರು ಹಾಗೂ ಅವರ ಮನೆಯವರಿಗೆ ಗೊತ್ತಿಲ್ಲದೇ ಮನೆಯಿಂದ ಹೋಗಿದ್ದಾನಾ ಪ್ರಜ್ವಲ್ ಅವರ ಕುಟುಂಬದವರ ಸಂಪರ್ಕದಲ್ಲಿ ಇಲ್ಲವಾ ಮೊದಲಿನಿಂದ ಪ್ರಜ್ವಲ್ ನನ್ನ ಸಂಪರ್ಕದಲ್ಲಿ ಇಲ್ಲ. ಪ್ರಜ್ವಲ್ ಪರ ಪ್ರಚಾರಕ್ಕೆ ಹೋದಾಗ ನನ್ನ ಮಗ ಎಂದಿದ್ದರು. ಆ ಹೇಳಿಕೆ ಅವರ ಸಂಪರ್ಕದಲ್ಲಿ ಇದ್ದ ಹಾಗೆ ಅಲ್ವಾ ಪ್ರಜ್ವಲ್ ವಿಚಾರ ಅವರ ಕುಟುಂಬಕ್ಕೆ ಎಲ್ಲವೂ ಗೊತ್ತಿದೆ ಎಂದು ಟಾಂಗ್ ಕೊಟ್ಟರು.