ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮಂಗಳೂರಪ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರು ಆರಂಭಿಕ ಮುನ್ನಡೆಯಾಗಿದೆ.
ದಕ್ಷಿಣ ಕನ್ನಡದಲ್ಲಿ 1ನೇ ಸುತ್ತು ಪೂರ್ಣಗೊಂಡಿದ್ದು ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ 2,836 ಮತ ಪಡೆದಿದ್ದಾರೆ. ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ 1,379 ಮತ ಪಡೆದಿದ್ದು, 1,457 ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿಯ ಭದ್ರ ಕೋಟೆ ಎಂದೇ ಹೇಳಲಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ವಿರುದ್ಧ ಬ್ರಿಜೇಶ್ ಚೌಟ ಅವರು ಆರಂಭಿಕ ಮುನ್ನಡೆಯಲ್ಲಿದ್ದಾರೆ.
ಕಳೆದ ಮೂರ್ನಾಲ್ಕು ಅವಧಿಗಳಿಂದಲೂ ಈ ಕ್ಷೇತ್ರದಲ್ಲಿ ಬಿಜೆಪಿಯೇ ಗೆಲುವು ಸಾಧಿಸಿದೆ.
ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಜನಾಕ್ರೋಶ, ಪಕ್ಷದ ಆಂತರಿಕ ವಲಯದಲ್ಲಿಯೂ ವಿರೋಧ ವ್ಯಕ್ತವಾದ ಹಿನ್ನೆಲೆ ಈ ಬಾರಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಬದಲಾಯಿಸಿತ್ತು.