ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ಕಿಡಿಗೇಡಿಗಳು ಚಿಕ್ಕಬಳ್ಳಾಪುರ ನಗರದ ಕಂದ ವಾರದಲ್ಲಿರುವ ಪ್ರದೀಪ್ ಈಶ್ವರ್ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟದಿಂದಾಗಿ ಅವರ ಮನೆಯ ಕಿಟಕಿ ಗಾಜುಗಳು ಒಡೆದು ಹೋಗಿದೆ. ಪೋಲೀಸರು ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಗೆ ಜಯದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.