ರಾಮನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಜಿಲ್ಲಾ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ವತಿಯಿಂದ ಜೂ. ೫ರ ಬುಧವಾರ ರಾಮನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನ-೨೦೨೪ರ ಕಾರ್ಯಕ್ರಮಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ನ್ಯಾ. ನಿಂಗಪ್ಪ ಪರಶುರಾಮ ಕೊಪರ್ಡೆ ಅವರು ಚಾಲನೆ ನೀಡಿದರು.
ರಾಮನಗರ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸೈಯದ್ ನಿಜಾಮುದ್ದೀನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.