Wednesday, May 21, 2025
Google search engine

Homeಅಪರಾಧಸಂತ್ರಸ್ತೆ ಕಿಡ್ನ್ಯಾಪ್ ಕೇಸ್: ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು

ಸಂತ್ರಸ್ತೆ ಕಿಡ್ನ್ಯಾಪ್ ಕೇಸ್: ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಜಾಮೀನು ನೀಡಿದೆ. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಈ ಮೂಲಕ ಭವಾನಿ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ೧೫ ದಿನಗಳಿಂದ ನಾಪತ್ತೆಯಾಗಿರುವ ಭವಾನಿ ರೇವಣ್ಣ ಅವರ ಬಂಧನಕ್ಕೆ ಎಸ್‌ಐಟಿ ತೀವ್ರ ಶೋಧ ನಡೆಸಿದ್ದು, ಸುಳಿವು ಸಿಗುತ್ತಿಲ್ಲ. ಬಂಧನ ಭೀತಿಯಲ್ಲಿದ್ದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

RELATED ARTICLES
- Advertisment -
Google search engine

Most Popular