Sunday, May 25, 2025
Google search engine

Homeರಾಜ್ಯರಾಜ್ಯ ಸರ್ಕಾರದಿಂದ ತೃತೀಯ ಲಿಂಗಿಗಳಿಗೆ ಮುಂದಿನ ತಿಂಗಳಿಂದ ಗೃಹಲಕ್ಷ್ಮಿ ಹಣ ಜಮಾ!

ರಾಜ್ಯ ಸರ್ಕಾರದಿಂದ ತೃತೀಯ ಲಿಂಗಿಗಳಿಗೆ ಮುಂದಿನ ತಿಂಗಳಿಂದ ಗೃಹಲಕ್ಷ್ಮಿ ಹಣ ಜಮಾ!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು ೨,೦೦೦ ರೂ. ನೀಡಲಾಗುತ್ತಿದೆ. ಇದೀಗ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ತೀರ್ಮಾನ ಕೈಗೊಂಡಿದ್ದು, ಮುಂದಿನ ತಿಂಗಳಿನಿಂದೇ ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಯೋಜನೆಯಡಿ ಹಣ ಜಮೆ ಮಾಡಲು ನಿರ್ಧರಿಸಿದೆ.

ರಾಜ್ಯ ಸರ್ಕಾರದ ತೃತೀಯ ಲಿಂಗಿಗಳಿಗೂ ಕೂಡ ಗೃಹಲಕ್ಷ್ಮಿ ಹಣ ನೀಡೋದಕ್ಕೆ ಮುಂದಾಗಿದೆ. ಈಗಾಗಲೇ ಅರ್ಜಿ ಸಹ ಸಿದ್ಧವಾಗುತ್ತಿದ್ದು, ಜಿಲ್ಲಾಧಿಕಾರಿಗಳು ನೀಡಿರುವ ಗುರುತಿನ ಚೀಟಿ ನೀಡಿ ಗೃಹಲಕ್ಷ್ಮಿಹಣಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಇದೇ ತಿಂಗಳ ಕೊನೆಯಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಸೈಬರ್ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.ಅರ್ಜಿ ಸಲ್ಲಿಸಿದ ತೃತೀಯ ಲಿಂಗಿಗಳಿಗೆ ಮುಂದಿನ ತಿಂಗಳಿನಿಂದ ಖಾತೆಗೆ ಹಣ ಜಮಾ ಆಗಲಿದೆ.

RELATED ARTICLES
- Advertisment -
Google search engine

Most Popular