ಮಂಡ್ಯ: ವಿಶ್ವ ರಕ್ತದಾನಿಗಳ ದಿನಾಚರಣೆ ಹಿನ್ನಲೆ ಜಿಲ್ಲಾಡಳಿತ, ಜಿ.ಪಂ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಬಳಿ ಡಿಹೆಚ್ಓ ಡಾ.ಮೋಹನ್ ಚಾಲನೆ ನೀಡಿದರು.
ಬಳಿಕ ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ಮೂಲಕ ಜಾಗೃತಿ ಮೂಡಿಸಲಾಯಿತು.

ರಕ್ತ ದಾನದಿಂದ ಜೀವ ಉಳಿಸಬಹುದು. ರಕ್ತದಾನದ ದಿನಾಚರಣೆಯನ್ನ ಸಂಭ್ರಮದಿಂದ ಆಚರಣೆ ಮಾಡಲಾಗುತ್ತೆ. ಪ್ರತಿಯೊಬ್ಬರೂ ಸಹ ರಕ್ತದಾನ ಮಾಡುವ ಮೂಲಕ ಮತ್ತೊಂದು ಜೀವ ಉಳಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಆಶಲತಾ, ಸೇರಿದಂತೆ ಹಲವರು ಭಾಗಿಯಾಗಿದ್ದರು.