ಬೆಂಗಳೂರು : ೨೦೧೯ರ ಎಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಅತಿಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆ ಗಡುವನ್ನು ರಾಜ್ಯ ಸರಕಾರ ಸೆಪ್ಟೆಂಬರ್ ೧೫ರ ವರೆಗೆ ವಿಸ್ತರಿಸಿದೆ.
ಈ ಹಿಂದೆ ಹಲವು ಗಡುವುಗಳನ್ನು ನೀಡಿದ್ದರೂ ಸಹ ಬಹುತೇಕ ವಾಹನ ಮಾಲೀಕರು ಇನ್ನೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಲ್ಲ. ಆದ್ದರಿಂದ ಗಡುವನ್ನು ಸೆಪ್ಟೆಂಬರ್ ೧೫ರವರೆಗೆ ವಿಸ್ತರಿಸಲಾಗಿದೆ. ಈ ಕುರಿತು ಸಚಿವ ರಾಮಲಿಂಗಾ ರೆಡ್ಡಿ, ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಸೆಪ್ಟೆಂಬರ್೧೫ ವರಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಡೆಡ್‌ಲೈನ್ ನೀಡಲಾಗಿದೆ. ಸೆಪ್ಟೆಂಬರ್ ೧೫ ಬಳಿಕ ಅವಧಿ ವಿಸ್ತರಣೆ ಇಲ್ಲ. ಈಗಾಗಲೇ ಹಲವು ಬಾರಿ ಗಡುವು ವಿಸ್ತರಣೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.