ಬೆಂಗಳೂರು : ರಾಜ್ಯದ ಹಲವಡೆ ಭಾರೀ ಮಳೆಯಾಗುತ್ತಿದ್ದು, ಇಂದೂ ಕೂಡ ವರುಣಾರ್ಭಟ ಮುಂದುವರೆಯುವ ಸಾಧ್ಯತೆ ಇದೆ ಎಮದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಂಗನವಾಡಿ ಮತ್ತು ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಗುರುವಾರ ಭಾರೀ ಮಳೆ ಸುರಿಯಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಶಾಲೆಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಜನರು ಮನೆಯಿಂದ ಹೊರ ಬರಲಾಗದಂತೆ ಧೋ ಅಂತ ಮಳೆ ಸುರಿಯುತ್ತಿದೆ. ಇಂದೂ ಕೂಡ ಭಾರೀ ಮಳೆಯಾಗಲಿದ್ದು, ಹವಾಮಾನು ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಕೊಡಗು ಇಂದೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಕೊಡಗು ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗಿನಲ್ಲಿ ಇಂದು ಯೆಲ್ಲೋ ಅಲರ್ಟ್ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸುವಂತೆ ಜಿಲ್ಲಾ ಶಿಕ್ಷಣ ಇಲಾಖೆ ಸೂಚಿಸಿದೆ. ಇದರ ಮೇರೆಗೆ ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಣೆ ಮಾಡಿದ್ದಾರೆ.