ಮೈಸೂರು : ಕೆಲಸ ಕಳೆದುಕೊಂಡ ಯುವಕನೊಬ್ಬ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರದಲ್ಲಿ ನಡೆದಿದೆ.
ಕಿರಣ್(೨೮) ಅತ್ಮಹತ್ಯೆ ಮಾಡಿಕೊಂಡ ಯುವಕ. ಟಿ.ನರಸೀಪುರದ ತನ್ನ ರೂಮ್‌ನಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾನೆ. ಕಿರಣ್ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ ನಿವಾಸಿಯಾಗಿದ್ದು ಟಿ.ನರಸೀಪುರದ ಶಾಹಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದನು ಎನ್ನಲಾಗಿದೆ.
ಡೆತ್‌ನೋಟ್‌ನಲ್ಲಿ ನನ್ನ ಸಾವಿಗೆ ಕಂಪನಿಯ ಕ್ವಾಲಿಟಿ ಎಜಿಎಂ ಲೋಕೇಶ್ ಹಾಗೂ ಹೆಚ್‌ಆರ್, ಅನಿಲ್ ಕಾರಣ ಎಂದು ಬರೆದಿದ್ದಾನೆ. ಕೆಲಸದಿಂದ ಬೇಕೆಂತಲೇ ತೆಗೆದಿದ್ದಾರೆ. ನನ್ನ ಬಗ್ಗೆ ಬೇರೆ ಕಡೆ ಕೆಟ್ಟ ಫೀಡ್ ಬ್ಯಾಕ್ ಕೊಟ್ಟು ಎಲ್ಲೂ ಕೆಲಸಕ್ಕೆ ತೆಗೆದುಕೊಳ್ಳದ ಹಾಗೆ ಮಾಡಿದ್ದಾರೆ. ಇವರಿಂದ ಕೆಲಸ ಸಿಗದೆ ನಾನು ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ನಲ್ಲಿ ಮೃತ ಕಿರಣ್ ಉಲ್ಲೇಖ ಮಾಡಿದ್ದಾನೆ.
ಈ ಕುರಿತು ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



