Wednesday, May 21, 2025
Google search engine

Homeರಾಜಕೀಯಸಿಡಿಗೆ ತಡೆಯಾಜ್ಞೆ ತರದ, ಭ್ರಷ್ಟಾಚಾರಿಯಲ್ಲದ ವಿಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ: ಕಾಂಗ್ರೆಸ್ ವ್ಯಂಗ್ಯ

ಸಿಡಿಗೆ ತಡೆಯಾಜ್ಞೆ ತರದ, ಭ್ರಷ್ಟಾಚಾರಿಯಲ್ಲದ ವಿಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ: ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು: ಹೊಸ ಸರ್ಕಾರ ರಚನೆಗೊಂಡರೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡದ ಬಿಜೆಪಿ ಕುರಿತು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಸಿಡಿಗೆ ತಡೆಯಾಜ್ಞೆ ತರದ, ಭ್ರಷ್ಟಾಚಾರಿಯಲ್ಲದ ವಿಪಕ್ಷದ ನಾಯಕರೊಬ್ಬರು ತುರ್ತಾಗಿ ಬೇಕಾಗಿದ್ದಾರೆಂದು ವ್ಯಂಗ್ಯವಾಡಿದೆ.

ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಆರ್ ಎಸ್ ಎಸ್ ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆಂದು ಹೇಳಿ, ಬಿಜೆಪಿ ಕುರಿತು ವ್ಯಂಗ್ಯವಾಡಿದೆ.

RELATED ARTICLES
- Advertisment -
Google search engine

Most Popular