ಮೈಸೂರು: ಉತ್ತರ ಪ್ರದೇಶದಲ್ಲಿ ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ರಾವಣ್ ರವರ ಮೇಲೆ ನಡೆದಿರುವ ಗುಂಡಿನ ದಾಳಿ ಖಂಡಿಸಿ ವಿಶ್ವವಿದ್ಯಾನಿಲಯದ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಸಂಘದಿಂದ ಮಾನಸ ಗಂಗೋತ್ರಿಯ ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಉತ್ತರ ಪ್ರದೇಶದಲ್ಲಿ ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ರಾವಣ್ ಅವರ ಮೇಲೆ ದಾಳಿಯಾಗಿರುವುದು ಖಂಡನೀಯ. ಅಲ್ಲಿ ಕಾನೂನು ಸುವ್ಯವಸ್ಥೆಯೇ ಹದಗೆಟ್ಟಿದೆ. ಇದರಿಂದ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕೋಮುವಾದಿ ಹಾಗೂ ಸಂವಿಧಾನ ವಿರೋಧಿ ಮನಸ್ಥಿತಿಗಳು ಈ ರೀತಿ ಮಾಡುತ್ತಿವೆ. ಸರ್ಕಾರ ಕೂಡಲೇ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪರಂಜ್ಯೋತಿ ಸೇರಿದಂತೆ ಹಲವರು ಭಾಗವಹಿಸಿದ್ದರು.