Wednesday, May 21, 2025
Google search engine

Homeರಾಜ್ಯಜುಲೈ ೨೪ಕ್ಕೆ ಮೋದಿ ೩.೦ ಸರ್ಕಾರದ ಮೊದಲ ಬಜೆಟ್ ಮಂಡನೆ ಸಾಧ್ಯತೆ

ಜುಲೈ ೨೪ಕ್ಕೆ ಮೋದಿ ೩.೦ ಸರ್ಕಾರದ ಮೊದಲ ಬಜೆಟ್ ಮಂಡನೆ ಸಾಧ್ಯತೆ

ನವದೆಹಲಿ: ಮೋದಿ ೩.೦ ಸರ್ಕಾರದ ಮೊದಲ ಬಜೆಟ್ ಜುಲೈ ೨೪ಕ್ಕೆ ಮಂಡನೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಜುಲೈ ೨೨ಕ್ಕೆ ಮುಂಗಾರು ಅಧಿವೇಶನ ಶುರುವಾಗಲಿದ್ದು, ಜುಲೈ ೨೩ಕ್ಕೆ ಆರ್ಥಿಕ ಸಮೀಕ್ಷಾ ವರದಿ ಪ್ರಸ್ತುತಪಡಿಸಲಾಗುತ್ತದೆ. ಜುಲೈ ೨೪ಕ್ಕೆ ಬಜೆಟ್ ಮಂಡನೆಯಾಗುವ ಸಾಧ್ಯತೆ ಇದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈಗಾಗಲೇ ಬಜೆಟ್ ತಯಾರಿಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ ಎನ್ನಲಾಗಿದೆ.

೧೮ನೇ ಲೋಕಸಭೆಯ ಮೊದಲ ಅಧಿವೇಶನ ಜುಲೈ ೨ರಂದು ಮುಕ್ತಾಯಗೊಂಡಿದೆ. ಜುಲೈ ೨೨ಕ್ಕೆ ಎರಡನೇ ಅಧಿವೇಶನ ಆರಂಭವಾಗಿ ಜುಲೈ ೨೪ಕ್ಕೆ ಬಜೆಟ್ ಮಂಡನೆ ಆಗಬಹುದು ಎನ್ನಲಾಗುತ್ತಿದೆ.

ಸಂಸತ್ತಿನಲ್ಲಿ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಬಾರಿಯ ಬಜೆಟ್ನಲ್ಲಿ ಬಡವರು, ಯುವಜನರು, ಮಹಿಳೆಯರು, ರೈತರಿಗೆ ಆದ್ಯತೆ ಸಿಗಲಿದೆ. ಹಾಗೆಯೇ, ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ನಿಟ್ಟಿನಲ್ಲಿ ಹಲವು ಐತಿಹಾಸಿಕ ಹೆಜ್ಜೆಗಳನ್ನು ಬಜೆಟ್ ನಲ್ಲಿ ಕೈಗೊಳ್ಳಲಾಗುವುದು ಎಂದೂ ಅವರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular