ಮೈಸೂರು: ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿ ಕಾಂತ ರೆಡ್ಡಿ .ಜಿ ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.

ಲಕ್ಷ್ಮೀ ಕಾಂತ ರೆಡ್ಡಿ ಅವರು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಈ ಹಿಂದೆ ಕೆಲಸ ನಿರ್ವಹಿಸಿದ್ದರು.