Wednesday, May 21, 2025
Google search engine

Homeರಾಜ್ಯಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ : ಶಾಲಾ-ಕಾಲೇಜಿಗೆ ರಜೆ ಘೋಷಣೆ

ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ : ಶಾಲಾ-ಕಾಲೇಜಿಗೆ ರಜೆ ಘೋಷಣೆ

ಮಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಭಾಗಕ್ಕೆ ಮತ್ತೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇಂದು-ನಾಳೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.
ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (೧೨ನೇ ತರಗತಿವರೆಗೆ)/ ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತವು ಶನಿವಾರ ಅಂದರೆ ಜುಲೈ ೦೬ ರಂದು ರಜೆ ಘೋಷಣೆ ಮಾಡಿದೆ.
ಉಳಿದಂತೆ ಜುಲೈ ೮ರಿಂದ ೧೦ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೊತೆಗೆ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

RELATED ARTICLES
- Advertisment -
Google search engine

Most Popular