ಮಂಡ್ಯ: ಹಾಲಿನ ಪ್ರೋತ್ಸಾಹ ಧನ ಬಿಡುಗಡೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಹಾಲು ಉತ್ಪಾದಕರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರಾಂತ ರೈತ ಸಂಘದ ಸಂಚಾಲಕ ಭರತ್ ರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಬಾಕಿ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು. ಹಾಲಿನ ಪ್ರೋತ್ಸಾಹ ಧನ 5ರೂ ನಿಂದ 10ರೂ ಗೆ ಏರಿಕೆ ಮಾಡಬೇಕು. ಹಾಲು ಉತ್ಪಾದಕರ ಮಕ್ಕಳಿಗೆ ವಸತಿ ನಿಲಯ ತೆರೆಯಬೇಕು. ಹಾಲು ಉತ್ಪಾದಕರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
ಪ್ರತಿಭಟನೆಯಲ್ಲಿ ರೈತರು ಭಾಗಿಯಾಗಿದ್ದರು.