ಮಂಗಳೂರು: ವಿದ್ಯುತ್ ಸ್ಪರ್ಶಕ್ಕೊಳಗಾಗಿ ಯುವತಿ ಮೃತಪಟ್ಟಿರುವ ಘಟನೆ ಗುರುಪುರದ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಇಂದು ಶುಕ್ರವಾರ ಬೆಳಗ್ಗೆ ನಡೆದಿದೆ.
ಆಶ್ನಿ ಶೆಟ್ಟಿ (೨೧) ಮೃತರು ಎಂದು ತಿಳಿದು ಬಂದಿದೆ. ಈಕೆ ಸಿಎ ಅಭ್ಯಾಸ ಮಾಡುತ್ತಿದ್ದರು ಎನ್ನಲಾಗಿದೆ. ತಂದೆ ಹರೀಶ್ ಎಂದಿನಂತೆ ದನಗಳನ್ನು ಮೇಯಿಸಲು ಮನೆಯಿಂದ ಹೊರಟಿದ್ದರು. ಈ ವೇಳೆ ಅವರೊಂದಿಗೆ ಮನೆಯ ನಾಯಿಯೂ ತೆರಳಿತ್ತು. ತಂದೆಯೊಂದಿಗೆ ಹೊರಟಿದ್ದ ನಾಯಿಯನ್ನು ಕರೆತರಳೆಂದು ಆಶ್ನಿ ತೆರಳಿದ್ದರು. ನಾಯಿ ನೀರು ತುಂಬಿದ್ದ ಗದ್ದೆಗೆ ಇಳಿದಾಗ ಆಶ್ನಿ ಕೂಡಾ ಗದ್ದೆಗೆ ಕಾಲಿಟ್ಟಿದ್ದಾಳೆ. ಈ ವೇಳೆ ವಿದ್ಯುತ್ ಆಘಾತ ಸಂಭವಿಸಿ ಆಶ್ನಿ ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ.