ಮಂಡ್ಯ: ಕೆ.ಆರ್.ಎಸ್ ಡ್ಯಾಂ ನಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಹಿನ್ನಲೆ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಪಾಯದ ಮಟ್ಟದಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ.
ಕಾವೇರಿ ನದಿ ಪಾತ್ರದ ಹಲವು ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಜನರು ನದಿಗೆ ಇಳಿಯದಂತೆ ಹಲವು ಕಡೆ ಸೂಚನಾ ಫಲಕ ಅಳವಡಿಸಲಾಗಿದೆ.

ಬಲಮುರಿ, ರಂಗನತಿಟ್ಟು, ನಿಮಿಷಾಂಭ ದೇಗುಲ, ಘೋಸಾಯ್ ಘಾಟ್, ಸಂಗಮದ ಬಳಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದ್ದು, ಪೊಲೀಸರನ್ನು ನಿಯೋಜಿಸಲಾಗಿದೆ.
ಪ್ರಸಿದ್ದ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಮೇಲೆ ಸಂಚಾರಕ್ಕೆ ತಡೆಗೋಡೆ ನಿರ್ಮಿಸಲಾಗಿದೆ.