Tuesday, May 20, 2025
Google search engine

Homeರಾಜ್ಯಸುದ್ದಿಜಾಲಪ್ರತಿಭಟನೆ ಮಾಡೋದು ಅವರವರ ಹಕ್ಕು: ಸಚಿವ ಸತೀಶ್ ಜಾರಕಿಹೊಳಿ

ಪ್ರತಿಭಟನೆ ಮಾಡೋದು ಅವರವರ ಹಕ್ಕು: ಸಚಿವ ಸತೀಶ್ ಜಾರಕಿಹೊಳಿ

ಮಂಡ್ಯ: ಕಾಗೆಮಂಟಿ ಕಾರ್ಯಕ್ರಮ ನಿಮಿತ್ತ ಆಗಮಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯನ್ನು ಮಂಡ್ಯದಲ್ಲಿ ಶಾಸಕ ಗಣಿಗ ರವಿಕುಮಾರ್ ನೇತೃತ್ವದಲ್ಲಿ ಮಂಡ್ಯದ ಸಂಜಯ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿ ಅಭಿನಂದಿಸಿದರು.

ಮಂಡ್ಯದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಬಿಜೆಪಿ ಜೆಡಿಎಸ್ ಪಾದಯಾತ್ರೆ ವಿಚಾರವಾಗಿ ಮಾತನಾಡಿ ಪ್ರತಿಭಟನೆ ಮಾಡೋದು ಅವರವರ ಹಕ್ಕು, ಈಗಾಗಲೇ ಸದನದಲ್ಲಿ ಇದರ ಬಗ್ಗೆ ಹೇಳಲಾಗಿದೆ. ಸಿಎಂ ಕೂಡ ಇದರ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ .ನಾವು ಅದರ ಬಗ್ಗೆ ಮಾತನಾಡುವುದು ಸೂಕ್ತ ಅಲ್ಲ ಸಮಗ್ರವಾಗಿ ತನಿಖೆಯಾಗಲಿ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ತನಿಖೆ ಬಳಿಕ ಉತ್ತರ ಸಿಗಲಿದೆ ಎಂದು ಹೇಳಿದರು.

ಈಗಾಗಲೇ ದೇಸಾಯಿ ಆಯೋಗ ತನಿಖಾ ತಂಡ ರಚಿಸಲಾಗಿದ್ದು, ತನಿಖೆ ಆಗುತ್ತೆ ಎಂದು ಮಾತನಾಡಿದರು. ಮುಖ್ಯಮಂತ್ರಿ ಬದಲಾವಣೆ ಚರ್ಚೆ ವಿಚಾರವಾಗಿ ಮಾತನಾಡಿ ಇವಾಗ ಯಾರು ಬದಲಾವಣೆ ಮಾಡಿದ್ದಾರೆ ಚರ್ಚೆ ಆಗುತ್ತೆ ಅನ್ನೋದು ಅದು ಅನವಶ್ಯಕ. ಅವಕಾಶ ಬಂದಾಗ ದಲಿತ ಮುಖ್ಯಮಂತ್ರಿ ಮಾಡೋಣ ಅದರ ಬಗ್ಗೆ ನಾವೆಲ್ಲರೂ ಕೈ ಜೋಡಿಸುತ್ತೇವೆ ಎಂದು ಹೇಳಿದರು


RELATED ARTICLES
- Advertisment -
Google search engine

Most Popular