ಮಂಡ್ಯ: ಮಂಡ್ಯದಲ್ಲಿ ಚಿರತೆ ಹಾವಳಿ ಮುಂದುವರೆದಿದ್ದು, ಮನೆಯ ಹಿಂಭಾಗ ಕಟ್ಟಿದ್ದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿ ಹಸು ಸಾವನಪ್ಪಿರುವ ಘಟನೆ ತಾಲೂಕಿನ ಬೆಳ್ಳೂಂಡಗೆರೆ ಗ್ರಾಮದಲ್ಲಿ ನಡೆದಿದೆ. ವೆಂಕಟೇಶ್ ಎಂಬುವವರಿಗೆ ಸೇರಿದ ಹಸು.
ಚಿರತೆ ಹಾವಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿರತೆ ಸರಿ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.