ಬೆಂಗಳೂರು: ಈ ಬಾರಿಯ ಬಜೆಟ್‍ನಲ್ಲಿ ರಾಜ್ಯ ಸರ್ಕಾರ ಪತ್ರಕರ್ತರಿಗೆ ನೀಡುವ ಮಾಸಾಶನದ ಮೊತ್ತವನ್ನು 10 ಸಾವಿರದಿಂದ 12 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಿದೆ. 2023-24ನೇ ಸಾಲಿನ ಆಯವ್ಯಯ ಮಂಡಿಸಿದ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ನೀಡುವ ಮಾಸಾಶನವನ್ನು 10 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಳ ಮಾಡಲಾಗುವುದು ಎಂದು ಘೋಷಿಸಿದರು.
ಅಲ್ಲದೆ ಮಾಸಾಶನ ಪಡೆಯುವ ಪತ್ರಕರ್ತರು ಮೃತಪಟ್ಟಾಗ ನೀಡಲಾಗುವ ಕುಟುಂಬದ ಮಾಸಾಶನವನ್ನು 3 ಸಾವಿರದಿಂದ 6 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದರು.