ಮದ್ದೂರು: ತಾಲೂಕಿನ ದೇಶಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಹಿರಿಯ ಶಾಲೆಯಲ್ಲಿ ರೋಟರಿ ಪ್ರಗತಿ ಹಾಗೂ ಪ್ರಥಮ್ ಮೈಸೂರು ಸಂಸ್ಥೆ ಸಹಯೋಗದೊಂದಿಗೆ ಇಂಗ್ಲೀಷ್ ಕಲಿಕಾ ಮೇಳವನ್ನು ಆಯೋಜನೆ ಮಾಡಲಾಗಿತ್ತು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕಲಿಕಾ ಮೇಳವನ್ನು ಆಯೋಜನೆ ಮಾಡಿ ವಿದ್ಯಾರ್ಥಿಗಳ ಮೂಲಕ ಇಂಗ್ಲೀಷ್ ಕಲಿಕೆಗೆ ಪ್ರೇರೇಪಣೆ ನೀಡಿದರು.
ಈ ವೇಳೆ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಪ್ರಕಾಶ್ ಮಾತನಾಡಿ, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಇಂಗ್ಲಿಷ್ ಮೇಳವನ್ನು ಏರ್ಪಡಿಸಿರುವುದು ಸಂತೋಷಕರ ವಿಷಯವಾಗಿದ್ದು, ಇಂತಹ ಸಂಘ ಸಂಸ್ಥೆಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳನ್ನು ಗುರುತಿಸಿ ಇಂಗ್ಲಿಷ್ ಮೇಳವನ್ನು ಮಾಡುತ್ತಿರುವುದು ಸಂತೋಷಕರ ವಿಷಯವಾಗಿದೆ ಎಂದರು.

ಇಂಗ್ಲಿಷ್ ಮೇಳದಲ್ಲಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಶಿಕ್ಷಕರು ಭಾಗವಹಿಸಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. ಈ ವೇಳೆ ದೇಶಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ದೇವರಾಜು, ಪ್ರಥಮ್ ಸಂಸ್ಥೆಯ ಮೋಹನ್ ಸೇರಿದಂತೆ ಇತರರು ಹಾಜರಿದ್ದರು.



                                    