Tuesday, May 20, 2025
Google search engine

Homeಸ್ಥಳೀಯಸೆ.14ರಂದು ರಾಷ್ಟ್ರೀಯ ಲೋಕ ಅದಾಲತ್

ಸೆ.14ರಂದು ರಾಷ್ಟ್ರೀಯ ಲೋಕ ಅದಾಲತ್

ಮೈಸೂರು : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದಂತೆ ದಿನಾಂಕ ಸೆ,೧೪ ರಂದು ಮೈಸೂರು ಜಿಲ್ಲೆಯನ್ನೊಳಗೊಂಡಂತೆ ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಕಾನೂನಿನ ಪ್ರಕಾರ ರಾಜಿಯಾಗಬಹುದಾದ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ.

ಮೈಸೂರು ನಗರ ಮತ್ತು ತಾಲ್ಲೂಕುಗಳಲ್ಲಿನ ನ್ಯಾಯಾಲಯಗಳಲ್ಲಿ ಒಟ್ಟು ೧,೧೭,೦೧೩ ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದು, ಅವುಗಳ ಪೈಕಿ ೫೮,೦೩೦ ಸಿವಿಲ್ ಪ್ರಕರಣಗಳು ಹಾಗೂ ೫೮,೯೮೩ ಕ್ರಿಮಿನಲ್ ಪ್ರಕರಣಗಳಿದ್ದು, ಪ್ರಸ್ತುತ ಸದರಿ ಪ್ರಕರಣಗಳಲ್ಲಿ ೩೦,೦೦೦ ಕ್ಕಿಂತ ಹೆಚ್ಚಿನ ಪ್ರಕರಣಗಳು ರಾಜಿಯಾಗಬಹುದಾದ ಪ್ರಕರಣಗಳೆಂದು ಗುರುತಿಸಲಾಗಿರುತ್ತದೆ. ರಾಜಿಯಾಗುವಂತಹ ಯಾವುದೇ ಪ್ರಕರಣಗಳನ್ನು ಕಕ್ಷಿಗಾರರ ವಿನಂತಿಯ ಮೇರೆಗೆ ಸಂಬಂಧಪಟ್ಟ ನ್ಯಾಯಾಲಯಗಳಲ್ಲಾಗಲೀ ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ಸಂಬಂಧಪಟ್ಟ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಿದಲ್ಲಿ, ಅಂತಹ ಪ್ರಕರಣಗಳನ್ನು ರಾಜಿ ಸಂಧಾನಕ್ಕಾಗಿ ತೆಗೆದುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು.


ಲೋಕ್ ಆದಾಲತ್‌ನ ಪ್ರಯೋಜನಗಳು:

  • ಲೋಕ್ ಅದಾಲತ್‌ನಲ್ಲಿ ರಾಜಿಯಾದಂತಹ ಪ್ರಕರಣಗಳಲ್ಲಿ ಮಾಡಿದ ಆವಾರ್ಡ್ / ಆದೇಶಕ್ಕೆ ನ್ಯಾಯಾಲಯಗಳಲ್ಲಿ ಇತ್ಯರ್ಥಪಡಿಸಿದ ಪ್ರಕರಣದಲ್ಲಿ ಆದ ಆದೇಶಕ್ಕೆ ಇರುವಷ್ಟೇ ಮಹತ್ವವಿರುತ್ತದೆ.
  • ವ್ಯಾಜ್ಯವನ್ನು ಅತ್ಯಂತ ಕಡಿಮೆ ಖರ್ಚಿನಲ್ಲಿ, ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಬಹುದು.
  • ಸಮಯದ ಉಳಿತಾಯ ಆಗುವುದಲ್ಲದೆ, ಕಕ್ಷಿಗಾರರ ಮಧ್ಯದ ಸಂಬಂಧ ಚೆನ್ನಾಗಿ ಉಳಿಯುತ್ತದೆ ಹಾಗೂ ಯಾವುದೇ ಕೋರ್ಟ್ ಫೀಸ್ ಕೊಡಬೇಕಾಗಿಲ್ಲ.
  • ಪಕ್ಷಗಾರರು ನೇರವಾಗಿ ಭಾಗವಹಿಸಬಹುದು ಹಾಗೂ ಸಂಧಾನಕಾರರು ಸೂಚಿಸುವ ಪರಿಹಾರ ತೃಪ್ತಿಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು.
  • ಸಿವಿಲ್ ಪ್ರಕರಣಗಳು ಇತ್ಯರ್ಥಗೊಂಡರೆ ಅವಾರ್ಡ್ ಮಾಡಲಾಗುವುದು, ಅದು ಸಾಮಾನ್ಯ ಡಿಕ್ರಿಯಷ್ಟೆ ಮಹತ್ವ ಪಡೆದುಕೊಂಡಿರುತ್ತದೆ.
  • ಪ್ರಕರಣಗಳು ರಾಜಿಯಾದಲ್ಲಿ ಶೇಕಡ ೧೦೦ ರಷ್ಟು ನ್ಯಾಯಾಲಯ ಶುಲ್ಕ ಹಿಂದಿರುಗಿಸಲಾಗುವುದು.
  • ಲೋಕ್ ಅದಾಲತ್ ಆವಾರ್ಡ್ ವಿರುದ್ಧ ಮೇಲ್ಮನವಿಗೆ ಅವಕಾಶವಿರುವುದಿಲ್ಲ.
RELATED ARTICLES
- Advertisment -
Google search engine

Most Popular