Wednesday, May 21, 2025
Google search engine

Homeಅಪರಾಧಕಾನೂನುಕೋವಿಡ್ ಲಸಿಕೆ ಅಡ್ಡಪರಿಣಾಮಗಳ ತನಿಖೆಗೆ ಮನವಿ: ಅರ್ಜಿ ವಜಾಗೊಳಿಸಿದ ಸುಪ್ರೀಂ

ಕೋವಿಡ್ ಲಸಿಕೆ ಅಡ್ಡಪರಿಣಾಮಗಳ ತನಿಖೆಗೆ ಮನವಿ: ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: ಕೋವಿಡ್ ಲಸಿಕೆಗಳಿಂದ ಆರೋಗ್ಯದ ದುಷ್ಪರಿಣಾಮಗಳ ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಲಸಿಕೆಗಳು ರಕ್ತ ಹೆಪ್ಪುಗಟ್ಟುವಿಕೆಯಂತಹ ಅಡ್ಡ ಪರಿಣಾಮಗಳನ್ನು ಉಂಟುಮಾಡುತ್ತವೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದರು. ಯುನೈಟೆಡ್ ಕಿಂಗ್‌ಡಮ್ ನಂತಹ ವಿದೇಶಗಳಲ್ಲಿ ಅದೇ ಕಾಳಜಿಯ ಮೇಲೆ ಕ್ಲಾಸ್ ಆಕ್ಷನ್ ಮೊಕದ್ದಮೆಗಳನ್ನು ದಾಖಲಿಸಲಾಗಿದೆ ಎಂದು ಅವರು ಉಲ್ಲೇಖಿಸಿದ್ದರು.

ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಅರ್ಜಿ ವಿಚಾರಣೆ ನಡೆಸಿತ್ತು. ಆರಂಭದಲ್ಲಿ, ಸಾಂಕ್ರಾಮಿಕ ಬಿಕ್ಕಟ್ಟನ್ನು ನಿವಾರಿಸಲು ಲಸಿಕೆಗಳು ಜಾಗತಿಕವಾಗಿ ನೆರವು ನೀಡಿವೆ. ಈಗ ಅಂತಹ ಅರ್ಜಿಗಳನ್ನು ಸಲ್ಲಿಸುವುದು ಸೂಕ್ತವಲ್ಲ ಎಂದು ಸಿಜೆಐ ಒತ್ತಿ ಹೇಳಿದರು.

ಅರ್ಜಿದಾರರು ನಿಜವಾಗಿಯೂ ನೊಂದಿದ್ದರೆ, ಅವರು ಆರ್ಟಿಕಲ್ ೩೨ ಅರ್ಜಿಗಳನ್ನು ಸಲ್ಲಿಸುವ ಬದಲು ಕ್ಲಾಸ್ ಆಕ್ಷನ್ ಸೂಟ್‌ಗಳನ್ನು ಸಲ್ಲಿಸಬೇಕು ಎಂದು ಸಿಜೆಐ ಹೇಳಿದರು.

RELATED ARTICLES
- Advertisment -
Google search engine

Most Popular