ನವದೆಹಲಿ: ಕಾಂಗ್ರೆಸ್ ಪಕ್ಷದಿಂದ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು ಅವರು ಅಕ್ಟೋಬರ್.೨೩ರಂದು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ.
ರಾಹುಲ್ ಗಾಂಧಿ ಅವರು ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರಿಂದಾಗಿ ಉಪ ಚುನಾವಣೆ ಘೋಷಣೆಯಾಗಿತ್ತು. ನವೆಂಬರ್.೧೩ರಂದು ವಯನಾಡು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.
ಈ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕೆ ಇಳಿಸಲಾಗಿದೆ. ಅವರು ಅಕ್ಟೋಬರ್.೨೩ರಂದು ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಯಾಗಿ ಅಧಿಕೃತವಾಗಿ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎಂಬುದಾಗಿ ಎಐಸಿಸಿ ಮೂಲಗಳು ತಿಳಿಸಿವೆ.