Tuesday, May 20, 2025
Google search engine

Homeಅಪರಾಧಕಾನೂನುನಟ ದರ್ಶನ್‌ಗೆ ಮಧ್ಯಂತರ ಜಾಮೀನು: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಪೊಲೀಸರ ಚಿಂತನೆ

ನಟ ದರ್ಶನ್‌ಗೆ ಮಧ್ಯಂತರ ಜಾಮೀನು: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಪೊಲೀಸರ ಚಿಂತನೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೂನ್ ೧೧ರಂದು ಬಂಧನವಾಗಿದ್ದ ನಟ ದರ್ಶನ್ ಗೆ ಅನಾರೋಗ್ಯದ ಕಾರಣ ನೀಡಿ ಚಿಕಿತ್ಸೆ ಪಡೆಯಲೆಂದು ಹೈಕೋರ್ಟ್ ೪೫ ದಿನಗಳ ಮಧ್ಯಂತರ ಜಾಮೀನು ನೀಡಿದೆ.

ಕೊಂಚ ಸಮಾಧಾನದಲ್ಲಿರುವ ದರ್ಶನ್ ಗೆ ಬಿಗ್ ಶಾಕ್ ನೀಡಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಕೊಟ್ಟಿರುವ ಆದೇಶದ ಪೂರ್ಣ ಪ್ರತಿ ದೀಪಾವಳಿ ರಜೆಯ ಕಾರಣ ಇನ್ನೂ ಪೊಲೀಸರ ಕೈ ಸೇರಿಲ್ಲ. ಇದಕ್ಕಾಗಿ ಪೊಲೀಸರು ಕಾಯುತ್ತಿದ್ದಾರೆ. ನಿನ್ನೆ ದರ್ಶನ್ ಗೆ ಮಧ್ಯಂತರ ಜಾಮೀನು ಸಿಗುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖಾ ತಂಡದ ಜೊತೆ ಮಹತ್ವದ ಸಭೆ ನಡೆಸಿ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ನಾಡಿದ್ದು ಸೋಮವಾರ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ತೆಗೆದುಕೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಸೋಮವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಚಿಂತಿಸಲಾಗಿದೆ. ಹೈಕೋರ್ಟ್ ಆದೇಶಕ್ಕೆ ಮೇಲ್ಮನವಿ ಸಲ್ಲಿಸಿದರೆ ದರ್ಶನ್ ಗೆ ಹಿನ್ನಡೆ ಆಗಬಹುದು.

RELATED ARTICLES
- Advertisment -
Google search engine

Most Popular