Saturday, May 24, 2025
Google search engine

Homeರಾಜ್ಯಬೆಂಗಳೂರಿನಲ್ಲಿ ಕಟ್ಟಡದಿಂದ ಜಿಗಿದು 18 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರಿನಲ್ಲಿ ಕಟ್ಟಡದಿಂದ ಜಿಗಿದು 18 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲಿ 12 ನೇ ಮಹಡಿಯಿಂದ ಜಿಗಿದು 18 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿ ಕಟ್ಟಡದಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಹೆಣ್ಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ವಿದ್ಯಾರ್ಥಿಯ ಗುರುತು ಪತ್ತೆಯಾಗಿಲ್ಲ. ಕಾಲೇಜು ಬದಲಾವಣೆ ವಿಚಾರಕ್ಕೆ ಪೋಷಕರ ಜೊತೆ ಅಸಮಾಧಾನಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular