Tuesday, May 20, 2025
Google search engine

Homeರಾಜ್ಯಮುಡಾ ಹಗರಣ: ಇಡಿಯಿಂದ ನನಗೆ ನೋಟಿಸ್ ಬಂದಿಲ್ಲ: ಸಚಿವ ಭೈರತಿ ಸುರೇಶ್ ಸ್ಪಷ್ಟನೆ

ಮುಡಾ ಹಗರಣ: ಇಡಿಯಿಂದ ನನಗೆ ನೋಟಿಸ್ ಬಂದಿಲ್ಲ: ಸಚಿವ ಭೈರತಿ ಸುರೇಶ್ ಸ್ಪಷ್ಟನೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದಂತ ಅಕ್ರಮದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂಬುದಾಗಿ ಸಚಿವ ಭೈರತಿ ಸುರೇಶ್ ಸ್ಪಷ್ಟ ಪಡಿಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು, ನನಗೆ ಇದುವರೆಗೆ ಇಡಿಯಿಂದ ಯಾವುದೇ ನೋಟಿಸ್ ಬಂದಿಲ್ಲ. ಮುಡಾ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿಲ್ಲ ಎಂಬುದಾಗಿ ತಿಳಿಸಿದರು.

ಮತ್ತೊಂದೆಡೆ ಮುಡಾ ಅಕ್ರಮ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯವರಿಗೆ ಇಡಿ ನೋಟಿಸ್ ನೀಡಿದೆ. ಅದರಲ್ಲಿ ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿರುವುದಾಗಿ ತಿಳಿದು ಬಂದಿದೆ.

RELATED ARTICLES
- Advertisment -
Google search engine

Most Popular