Wednesday, May 21, 2025
Google search engine

Homeರಾಜ್ಯಮುರುಡೇಶ್ವರದಲ್ಲಿ ಮುಳುಗಡೆಯಾದ ೪ ವಿದ್ಯಾರ್ಥಿಗಳ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 5 ಲಕ್ಷ ರೂ.ಪರಿಹಾರ ಮಂಜೂರು

ಮುರುಡೇಶ್ವರದಲ್ಲಿ ಮುಳುಗಡೆಯಾದ ೪ ವಿದ್ಯಾರ್ಥಿಗಳ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 5 ಲಕ್ಷ ರೂ.ಪರಿಹಾರ ಮಂಜೂರು

ಬೆಂಗಳೂರು: ಕೋಲಾರ ಜಿಲ್ಲೆಯ ಮುಳಬಾಗಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮುರುಡೇಶ್ವರದಲ್ಲಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೫ ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಿದ್ದಾರೆ.

ಇದೇ ವೇಳೆ ಘಟನೆ ಬಗ್ಗೆ ಮುಖ್ಯಮಂತ್ರಿಗಳು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಅಧ್ಯಯನ ಪ್ರವಾಸದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳ ಪಾರ್ಥಿವ ಶರೀರವನ್ನು ಅವರವರ ಊರಿಗೆ ಕಳುಹಿಸುವಂತೆ ಈಗಾಗಲೇ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಇದೇ ಸಮಯದಲ್ಲಿ, ಮುಖ್ಯಮಂತ್ರಿಗಳು ಎಲ್ಲಾ ಶಾಲೆಗಳಿಗೆ ವಿದ್ಯಾರ್ಥಿಗಳೊಂದಿಗೆ ಅಧ್ಯಯನ ಪ್ರವಾಸಕ್ಕೆ ಕಳುಹಿಸುವ ಶಿಕ್ಷಕರು, ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಮತ್ತು ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮಗಳನ್ನು ಖಾತ್ರಿಪಡಿಸಿಕೊಳ್ಳುವಂತೆ ವಿನಂತಿಸಿದ್ದಾರೆ.

RELATED ARTICLES
- Advertisment -
Google search engine

Most Popular