Monday, January 12, 2026
Google search engine

Homeಅಪರಾಧಕೆಲಸದ ಒತ್ತಡ ನಗರಸಭೆ ಬಿಲ್ ಕಲೆಕ್ಟರ್ ಆತ್ಮಹತ್ಯೆ

ಕೆಲಸದ ಒತ್ತಡ ನಗರಸಭೆ ಬಿಲ್ ಕಲೆಕ್ಟರ್ ಆತ್ಮಹತ್ಯೆ

ಹೊಸಪೇಟೆ (ವಿಜಯನಗರ): ಕೆಲಸದ ಒತ್ತಡದಿಂದ ಹೊಸಪೇಟೆ ನಗರಸಭೆಯ ಬಿಲ್ ಕಲೆಕ್ಟರ್ ಎಚ್.ಮಂಜುನಾಥ್ ಅವರು ಕಡ್ಡಿರಾಂಪುರದ ಲಾಡ್ಜ್ ಒಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಗುರುವಾರ ಬೆಳಿಗ್ಗೆ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಜುನಾಥ್ ಅವರು ಹೊಸ ವರ್ಷದ ಆರಂಭದ ದಿನವೇ ತಮಗೆ ಕೆಲಸದ ಒತ್ತಡದ ಇದೆ ಎಂದು ಹೇಳಿ ಪ್ಲಂಬಿಂಗ್‌ಗೆ ಬಳಸುವ ಗಮ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಆಸ್ಪತ್ರೆಗೆ ದಾಖಲಿಸಿ ಚೇತರಿಸಿಕೊಂಡಿದ್ದ ಅವರು ಇದೀಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜನವರಿ ೧ರಂದು ಅವರು ಆತ್ಮಹತ್ಯೆಗೆ ಯತ್ನಿಸುವ ಮೊದಲು ತಮ್ಮ ಮೊಬೈಲ್‌ನಲ್ಲಿ ಸಂದೇಶ ಕಳುಹಿಸಿದ್ದರು. ಈ ಬಾರಿ ಮತ್ತೆ ಡೆತ್‌ನೋಟ್ ಬರೆದಿಟ್ಟು ಅಥವಾ ಸಂದೇಶ ಕಳುಹಿಸಿದ್ದಾರೆಯೇ ಎಂಬ ಕುರಿತು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

RELATED ARTICLES
- Advertisment -
Google search engine

Most Popular