Tuesday, May 20, 2025
Google search engine

Homeಅಪರಾಧಪೋಕ್ಸೋ ಕೇಸ್ : ಬಿ.ಎಸ್ ಯಡಿಯೂರಪ್ಪ ವಿರುದ್ಧ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ

ಪೋಕ್ಸೋ ಕೇಸ್ : ಬಿ.ಎಸ್ ಯಡಿಯೂರಪ್ಪ ವಿರುದ್ಧ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ

ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಷರತ್ತು ಸಡಿಲಿಸಿ ಎಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ಹೈಕೋರ್ಟ್ ಷರತ್ತು ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಷರತ್ತು ಸಡಿಲಿಸಿ ಕೋರಿ ಹೈಕೋರ್ಟಿಗೆ ಬಿಎಸ್ ಯಡಿಯೂರಪ್ಪ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.

ಬಿಎಸ್ ಯಡಿಯೂರಪ್ಪ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್ ಪಿ ಪಿ ಕಾಲಾವಕಾಶ ಕೋರಿದ್ದಾರೆ. ಈಗಾಗಲೇ ಬಿಎಸ್ ಯಡಿಯೂರಪ್ಪ ಅವರು ಕೋರ್ಟ್ ಷರತ್ತು ಉಲ್ಲಂಘಿಸಿದ್ದಾರೆ. ಕೋರ್ಟ್ ಅನುಮತಿ ಪಡೆಯದೆ ವ್ಯಾಪ್ತಿ ಬಿಟ್ಟು ಪ್ರಯಾಣಿಸಿದ್ದಾರೆ ಎಂದು ಹೈಕೋರ್ಟ್ ಗೆ ಎಸ್‌ಪಿಪಿ ಅಶೋಕ್ ನಾಯಕ್ ಹೇಳಿಕೆ ನೀಡಿದರು. ಈಗಾಗಲೇ ಕೇಸ್ ಸಂಬಂಧ ತಡೆಯಾಜ್ಞೆ ಇರುವ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮಾರ್ಚ್ 24ಕ್ಕೆ ಮುಂದೂಡಿ ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶ ಹೊರಡಿಸಿತು.

ಅಲ್ಲದೇ ಕಳೆದ ಮಾರ್ಚ್ 14 ರಂದು ಪೋಕ್ಸೋ ಕೇಸ್’ ನಲ್ಲಿ ಮಾಜಿ ಸಿಎಂ B.S ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದ್ದು, ಕಾಗ್ನಿಜೆನ್ಸ್, ಸಮನ್ಸ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.ಅದೇ ರೀತಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಖುದ್ದು ಹಾಜರಾತಿಗೂ ಹೈಕೋರ್ಟ್ ತಡೆ ನೀಡಿದೆ.

ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್ ಇತ್ತೀಚೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದ ಹೈಕೋರ್ಟ್ ಯಡಿಯೂರಪ್ಪರನ್ನು ಬಂಧಿಸದಂತೆ ಸೂಚನೆ ನೀಡಿತ್ತು. ಬಳಿಕ ವಿಚಾರಣೆಯ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿತ್ತು.

ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.

RELATED ARTICLES
- Advertisment -
Google search engine

Most Popular