ಮೈಸೂರು: ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಅವರು ಪ್ರಕಟಣೆಯ ಮೂಲಕ ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಸದಸ್ಯರಿಗೆ ಇ-ಕೆವೈಸಿ (e-KYC) ಮಾಡಿಸುವುದು ಕಡ್ಡಾಯವಾಗಿದ್ದು, ಇದಕ್ಕಾಗಿ ಕೊನೆಯ ದಿನಾಂಕ ಏಪ್ರಿಲ್ 30 ಎಂದು ತಿಳಿಸಿದ್ದಾರೆ.
ಇ-ಕೆವೈಸಿ ಪ್ರಕ್ರಿಯೆ ಇನ್ನೂ ಪೂರ್ಣಗೊಳಿಸದ ಸದಸ್ಯರು ಹತ್ತಿರದ ನ್ಯಾಯಬೆಲೆ ಅಂಗಡಿಗೆ ತಕ್ಷಣ ಭೇಟಿ ನೀಡಿ, ಅಗತ್ಯ ದಾಖಲೆಗಳೊಂದಿಗೆ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಈ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿದೆ.
ಅರ್ಜಿದಾರರು ಪಡಿತರ ಚೀಟಿ, ಆಧಾರ್ ಕಾರ್ಡ್, ಗ್ಯಾಸ್ ಕನೆಕ್ಷನ್ ಪುಸ್ತಕ, ಮತ್ತು ಅಗತ್ಯವಿದ್ದರೆ ಜಾತಿ ಪ್ರಮಾಣ ಪತ್ರಗಳನ್ನು (ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ) ತೆಗೆದುಕೊಂಡು ಹೋಗಬೇಕು. ಇ-ಕೆವೈಸಿ ಮಾಡಿಸದಿದ್ದರೆ ಮುಂದಿನ ದಿನಗಳಲ್ಲಿ ಪಡಿತರ ಲಾಭ ಪಡೆಯಲು ಸಮಸ್ಯೆಯಾಗುವ ಸಾಧ್ಯತೆ ಇದೆ.
ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಎಲ್ಲರು ಸಮಯಕ್ಕೆ ಮುನ್ನವೇ ತಮ್ಮ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ಸಮಯ ತಪ್ಪದಂತೆ ಇ-ಕೆವೈಸಿ ಪ್ರಕ್ರಿಯೆ ಮುಗಿಸಿ, ಪಡಿತರ ಸೇವೆ continued ಆಗಿ ಪಡೆಯುವುದು ಖಚಿತಪಡಿಸಿಕೊಳ್ಳಿ.